ಜ.22ರಿಂದ ಭಾರತ Vs ಇಂಗ್ಲೆಂಡ್ ಹೈವೋಲ್ಟೇಜ್ ಸರಣಿ – ಇಲ್ಲಿದೆ ಡಿಟೇಲ್ಸ್
1 min read
ಮುಂಬೈ: ಇದೇ ಜನವರಿ 22 ರಿಂದ ಭಾರತ ಮತ್ತು ಇಂಗ್ಲೆಂಡ್ (Ind vs Eng) ನಡುವೆ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಪ್ರಸಕ್ತ ವರ್ಷದಲ್ಲಿ ಭಾರತ ತಂಡಕ್ಕೆ ಇದು ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಾಗಿದೆ.ಜ.22ರಿಂದ ಫೆಬ್ರವರಿ 2ರ ವರೆಗೆ 5 ಪಂದ್ಯಗಳ ಟಿ20 ಸರಣಿ (T20 Series) ನಡೆಯಲಿದ್ದು, ಬಳಿಕ ಫೆಬ್ರವರಿ 6 ರಿಂದ 12ರ ವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ಸರಣಿಗೆ ಮಿಸ್ಟರ್-360 ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕತ್ವದಲ್ಲಿ ಭಾರತ ತಂಡವನ್ನು ಪ್ರಕಟಿಸಿರುವ ಬಿಸಿಸಿಐ (BCCI), ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನ ಪ್ರಕಟಿಸಿದೆ.
