ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಪರ್ನೀಚರ್ ಅಂಗಡಿ
1 min read
ಚಿಕ್ಕೋಡಿ : ಪರ್ನೀಚರ್ ಅಂಗಡಿಗೆ ಆಕಸ್ಮಿಕವಾಗಿ ಶಾರ್ಟ್ ಸಕ್ರ್ಯೂಟ್ ತಗುಲಿ, ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಬೆಂಕಿಗಾಹುತಿಯಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.ಮುಸಾ ಜಮಾದಾರ ಎಂಬುವರಿಗೆ ಸೇರಿದ ಪರ್ನೀಚರ್ ಅಂಗಡಿಯಾಗಿದ್ದು, ಅಂದಾಜು 6 ಲಕ್ಷ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿದೆ.
ಸ್ಥಳೀಯರಿಂದ ಚಿಕ್ಕೋಡಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ,
ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
