8.5ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಪ್ರಭು ಚವ್ಹಾಣ ದಿಢೀರ್ ಭೇಟಿ ರಸ್ತೆ ಕಾಮಗಾರಿ ಪರಿಶೀಲನೆ
1 min read
ಬೀದರ್ : ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ದಾಬಕಾ(ಸಿ) ಗ್ರಾಮದಿಂದ ವ್ಹಾಯಾ ಖೇರ್ಡಾ, ಚಿಕ್ಕಿ(ಯು) ಮೂಲಕ ಮಹಾರಾಷ್ಟ್ರ ಗಡಿ ಭಾಗದವರೆಗೆ ನಡೆಯುತ್ತಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಪ್ರಭು ಚವ್ಹಾಣ ದಿಢೀರ್ ಭೇಟಿ ಕಾಮಗಾರಿ ಗುಣಮಟ್ಟ ಪರಿಶೀಲನೆ ನಡೆಸಿದರು. ರಸ್ತೆಯ ಮೇಲೆ ಸಂಚರಿಸಿ ಕಾಮಗಾರಿ ಗುಣಮಟ್ಟದ ಬಗ್ಗೆ ಅಧಿಕಾರಿ ಗಳಿಂದ ಮಾಹಿತಿ ಪಡೆದರು.
ಕಾಮಗಾರಿ ಅಂದಾಜು ಪಟ್ಟಿಯಲ್ಲಿ ಇರುವಂತೆ ರಸ್ತೆ ಕಾಮಗಾರಿ ನಡೆಯಬೇಕು. ಗುಣಮಟ್ಟ ಮತ್ತು ನಿಗದಿತ ಅವಧಿಯೊಳಗೆ ಕಾಮಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಂಬಂಧಿಸಿದ ಅಧಿಕಾರಿಗಳು ಕೂಡ ಕೈಕಟ್ಟಿ ಕುಳಿತುಕೊಳ್ಳದೇ ಕೆಲಸ ನಡೆಯುವ ಸ್ಥಳಕ್ಕೆ ಆಗಾಗ ಭೇಟಿ ನೀಡಿ ಗಮನಿಸಬೇಕು ಎಂದು ಖಡಕ ಸೂಚನೆ ನೀಡಿದರು. ರಸ್ತೆ ಡಾಂಬರೀಕರಣ ಮತ್ತು ಕ್ಯೂರಿಂಗ್ ಸರಿಯಾಗಿ ಆಗಬೇಕು. ಜನರಿಂದ ಯಾವುದೇ ರೀತಿಯ ದೂರುಗಳು ಬಾರದ ಹಾಗೆ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು ಎಂದು ಗುತ್ತಿಗೆ ದಾರರಿಗೆ ಎಚ್ಚರಿಸಿದರು…
ಮಹಾರಾಷ್ಟ್ರದ ಉದಗೀರ ಸಂಪರ್ಕಿಸುವ ರಸ್ತೆಯಾಗಿದ್ದರಿಂದ ಸಾಕಷ್ಟು ಪ್ರಯಾಣಿಕರು ಸಂಚರಿಸುತ್ತಾರೆ.. ಹೀಗಾಗಿ ಜನರ ಅನುಕೂಲವಾಗುವ ಉದ್ದೇಶದಿಂದ 8.5ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ… ಈ ಹಿಂದೆಕೆಲಸ ಅರ್ಧಕ್ಕೆ ನಿಲ್ಲಿಸಿದ್ದರಿಂದ ಸಾರ್ವಜನಿಕರು ಸುಮಾರು ಎರಡು ವರ್ಷಗಳ ಕಾಲ ಸಾಕಷ್ಟು ತಾಪತ್ರಯ ‘ಅನುಭವಿಸಿದ್ದರು. ಮುಂದೆ ಹಾಗಾಗ ಬಾರದು. ಕೆಲಸ ಪೂರ್ಣ ಗೊಳ್ಳುವವರೆಗೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವಂತಿಲ್ಲ ಎಂದು ಗುತ್ತಿಗೆದಾರರಿಗೆ ಖಡಕ್ಕಾಗಿ ಸೂಚಿಸಿದರು….
