
ವಿಜಯಪುರ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿ ತೀರ್ಮಾನ ಕೈಗೊಂಡಿದೆ ಎಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ವಿನೂತನ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿಜಯಪುರ ನಗರದ ಕೇಂದ್ರೀಯ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳ ವಿನೂತನ ಪ್ರತಿಭಟನೆ ನಡೆಸುತ್ತಿದ್ದಾರೆ, ರಾಜ್ಯದ 9 ವಿಶ್ವ ವಿದ್ಯಾಲಯಗಳನ್ನು ಸರ್ಕಾರ ಮುಚ್ಚಲು ಹೊರಟಿದೆ ಎಂದು ವಿದ್ಯಾರ್ಥಿಗಳ ಆಕ್ರೋಶಗೊಳ್ಳುತ್ತಿದ್ದಾರೆ, ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸ ಭಿಕ್ಷಾಟಣೆ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ, ನಗರದ ಬಸ್ ನಿಲ್ದಾಣದ ಬಳಿಯ ಅಂಗಡಿಗಳಲ್ಲಿ ಭಿಕ್ಷಾಟಣೆ ಮಾಡಿ ಹಣ ಸಂಗ್ರಹಿಸಿ ಆರ್ಥಿಕ ಪರಿಸ್ಥಿತಿಯ ನೆಪವೊಡ್ಡಿ ವಿಶ್ವ ವಿದ್ಯಾಲಯಗಳನ್ನು ಸರ್ಕಾರ ಮುಚ್ಚಲು ಮುಂದಾಗಿದೆ ಎಂದು ಪ್ರತಿಭಟನಾ ನಿರತರ ಆಕ್ರೋಶಗೊಂಡರು.
