ಸಿಎಂ ಸಿದ್ದರಾಮಯ್ಯ ಪರ ನಿಂತ ಮಾಲೂರು ಶಾಸಕ ಕೆವೈ ನಂಜೇಗೌಡ.
1 min read
https://youtu.be/7WhzNNX6v-8?si=LneR8LenllKcwiRR
ಕೋಲಾರ: ಮತ್ತೊಬ್ಬ ಕಾಂಗ್ರೆಸ್ ಶಾಸಕರಿಂದ ಸಿದ್ದರಾಮಯ್ಯ ಪರ ಹೇಳಿಕೆ ಕೊಡುವ ಮೂಲಕ ಕಾಂಗ್ರೆಸ್ನಲ್ಲಿನ ಶೀತಲ ಸಮರದಲ್ಲಿ ಸಿದ್ದರಾಮಯ್ಯರ ವರ್ಚಸ್ಸು ಎತ್ತರಕ್ಕೆ ಏರುತ್ತಿರುವುದು ರಾಜಕೀಯ ವಿಶ್ಲೇಷಕರ ಪ್ರಕಾರವೇ ಸಿಎಂ ಬಲ ಗುರ್ತಿಸಲಾಗುತ್ತಿದೆ.
ಕೋಲಾರದ ಡಿಸಿ ಕಚೇರಿಯಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ಹೇಳಿಕೆ: ‘ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ, ನಮಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ ನಾವೇಕೆ ಇನ್ನೊಬ್ಬ ಮುಖ್ಯಮಂತ್ರಿಯನ್ನು ಕೇಳಬೇಕು, ನಮ್ಮ ಮಾಲೂರು ತಾಲ್ಲೂಕಿಗೆ ಎರಡು ಸಾವಿರ ಕೋಟಿ ಅನುದಾನ ಕೊಟ್ಟಿದ್ದಾರೆ, ಸದ್ಯಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ,
ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಉಳಿದಿದ್ದು ಹೈಕಮಾಂಡ್ಗೆ ಬಿಟ್ಟ ವಿಚಾರ, ಈ ಬಾರಿ ಬಜೆಟ್ ನಲ್ಲಿ ಜಿಲ್ಲೆಗೆ ಮೆಡಿಕಲ್ ಕಾಲೇಜ್ ಸಿಗುತ್ತದೆ’. ಎಂದು ಸಿಎಂ ಪರ ಮೆಚ್ಚುಗೆ ವ್ಯಕ್ತಪಡಿಸುತ್ತಲೇ ಸಿಎಂ ಆಕಾಂಕ್ಷಿಗಳ ಒಳ ಇಂಗಿತಕ್ಕೆ ಎಳ್ಳುನೀರು ಬಿಟ್ಟರು.
