[t4b-ticker]

ಜಿಬಿಎಸ್‌ಗೆ ಕರ್ನಾಟಕದ ಮೊದಲ ವ್ಯಕ್ತಿ ಸಾವು… ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಚಿಕ್ಕೋಡಿ ವ್ಯಕ್ತಿ ನಿಧನ

1 min read
Share it

 

ಚಿಕ್ಕೋಡಿ: ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಗುಯಿಲಿನ್ ಬರ್ರೆ ಸಿಂಡ್ರೋಮ್‌ (ಜಿಬಿಎಸ್‌)ಗೆ ಇದೀಗ ಕರ್ನಾಟಕದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ. ಚಿಕ್ಕೋಡಿಯ 64 ವರ್ಷದ ವೃದ್ಧರೊಬ್ಬರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶನಿವಾರ ಈ ವ್ಯಾಧಿಯಿಂದ ಸಾವಿಗೀಡಾಗಿದ್ದಾರೆ. ಇದು ಈ ಕಾಯಿಲೆಗೆ ರಾಜ್ಯದವರು ಬಲಿಯಾದ ಮೊದಲ ಪ್ರಕರಣವಾಗಿದೆ. ಇದರೊಂದಿಗೆ ಕರ್ನಾಟಕ ಅಕ್ಕಪಕ್ಕದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈಗಾಗಲೇ ಈ ವ್ಯಾಧಿ ಕಾಣಿಸಿಕೊಂಡಿದೆ.

 

ಇದು ಸಾಂಕ್ರಾಮಿಕ ಅಲ್ಲವಾದರೂ, ಭಾರೀ ಪ್ರಮಾಣದಲ್ಲಿ ಮಾರಣಾಂತಿಕವೂ ಅಲ್ಲವಾದರೂ, ವ್ಯಾಧಿ ತಗಲಲು ನಿಖರ ಕಾರಣ ಏನು ಎಂಬುದು ಇದುವರೆಗೂ ಖಚಿತವಾದ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಈ ಕುರಿತು ಆತಂಕ ಉಂಟಾಗಿದೆ. ಮೊದಲಿಗೆ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿದ್ದ ಜಿಬಿಎಸ್‌ಗೆ ಈವರೆಗೆ ಮಹಾರಾಷ್ಟ್ರದಲ್ಲಿ 11, ಪಶ್ಚಿಮ ಬಂಗಾಳದಲ್ಲಿ 3, ಆಂಧ್ರಪ್ರದೇಶದಲ್ಲಿ 2, ಅಸ್ಸಾಂ, ತಮಿಳುನಾಡು ಹಾಗೂ ಕರ್ನಾಟಕದ ಒಬ್ಬರು ಸೇರಿ ದೇಶದಲ್ಲಿ ಒಟ್ಟು 19 ಜನ ಸಾವನ್ನಪ್ಪಿದ್ದಾರೆ.

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?