ಮಹಿಳೆ ತಲೆಗೆ ಹೊಡೆದು ಕಿವಿಯೋಲೆ ಕಿತ್ತು ಪರಾರಿಯಾದ ದುಷ್ಕರ್ಮಿ
1 min read
ಹೊಸದುರ್ಗ : ಮಹಿಳೆಯೊಬ್ಬರು ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ದುಷ್ಕರ್ಮಿಯೊಬ್ಬ ಮಹಿಳೆಯ ಕಿವಿ ಓಲೆಯನ್ನು ಕಿತ್ತುಕೊಂಡೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಹೆಗ್ಗೆರೆ ಗ್ರಾಮದ ಮಹಿಳೆ ಅಂಬಿಕಾ ತಮ್ಮ ತೋಟದ ಜಮೀನಿನಲ್ಲಿ ಕೆಲಸ ನಿರ್ವಹಿಸುವ ವೇಳೆ ದುಷ್ಕರ್ಮಿಯೊಬ್ಬ ಮಹಿಳೆಯ ತಲೆ ಹಿಂಬದಿಗೆ ಹೊಡೆದು ಮಹಿಳೆಯ ಕಿವಿಯಲ್ಲಿದ್ದ ಓಲೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಗಾಯಗೊಂಡ ಮಹಿಳೆಯನ್ನು ತುಮಕೂರು
ಜಿಲಾಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯೂರು ಡಿವೈಎಸ್ಪಿ ಟಿಬಿ ರಾಜಣ್ಣ ತಿಳಿಸಿದ್ದಾರೆ.
ಘಟನಸ್ಥಳಕ್ಕೆ ಡಿವೈಎಸ್ ಪಿ ಟಿ.ಬಿ.ರಾಜಣ್ಣ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಹೊಸದುರ್ಗ ತಾಲೂಕಿನ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ…
