16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಮುಖ್ಯಮಂತ್ರಿ ಅವರಿಂದ ಲಾಂಛನ ಉದ್ಘಾಟನೆ
1 min read
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಉದ್ಘಾಟನೆ ಮಾಡಿದರು. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧುಕೋಕಿಲ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಾರ್ಚ್ ಒಂದರಿಂದ 8ರ ವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ದೇಶ-ವಿದೇಶಗಳ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.
