[t4b-ticker]

ರಾಜ್ಯಾದ್ಯಂತ ಮಾರ್ಚ್​ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ.. ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆ

1 min read
Share it

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಗಳು  ಆರಂಭವಾಗಲಿದ್ದು ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗಳು  ಮಾರ್ಚ್‌ ೧ ರಿಂದ  ಮಾರ್ಚ್​ ೨೦ ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೆಕು. ಹಾಲ್​ ಟಿಕೆಟ್​, ಪೆನ್ನು ತೆಗೆದುಕೊಂಡು ಬರಬೇಕು. ವಿದ್ಯಾರ್ಥಿಗಳು ಪರೀಕ್ಷೆ ಹೇಗೆ ಬರೆಯಬೇಕು ಎನ್ನುವುದರ ಕುರಿತು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವುದಕ್ಕೆ ಅಭ್ಯಾಸ ಮಾಡಿದ್ದು ಎಲ್ಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನಾಳೆಯಿಂದ ನಡೆಯುವ ಪರೀಕ್ಷೆ ಬರೆಯಲು ಸಿದ್ದರಾಗಿದ್ದಾರೆ.

 

ಕಾಲೇಜಿಗೆ ಬಸ್​ನಲ್ಲಿ ಹೋಗುವಾಗ ವಿದ್ಯಾರ್ಥಿಗಳು ತಮ್ಮ ಹಾಲ್​ಟಿಕೆಟ್ ಅನ್ನು ಕೆಎಸ್​​ಆರ್​ಟಿಸಿ, ಬಿಎಂಟಿಸಿ ಬಸ್​ಗಳ ಕಂಡಕ್ಟರ್​ಗೆ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು.ಈ ಪ್ರಯಾಣವು ಕೇವಲ ಪರೀಕ್ಷೆ ಸಮಯದಲ್ಲಿ ಮಾತ್ರ ಅನುಮತಿ ಇರುತ್ತದೆ. ಈ ಬಾರಿ ಪರೀಕ್ಷೆಯನ್ನ ವೆಬ್ ಕಾಸ್ಟಿಂಗ್ ಮೂಲಕ ಮಾನಿಟರ್ ಮಾಡಲಾಗುತ್ತದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿರುತ್ತೆ.

 

ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆಗಳು

  • ಪರೀಕ್ಷೆಯ ಮುಖ್ಯ ಅಧೀಕ್ಷಕರು ಕ್ಯಾಮೆರಾ ಇರದ ಸಾಮಾನ್ಯ ಮೊಬೈಲ್ ಇಟ್ಟುಕೊಳ್ಳಬಹುದು
  • ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧಿಸಲಾಗಿದೆ.
  • ಪರೀಕ್ಷೆ ಸಮಯದಲ್ಲಿ ಎಲ್ಲ ರೀತಿಯ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ನಿಷೇಧ
  • ಪರೀಕ್ಷಾ ಕೇಂದ್ರದ ಒಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಸಂಪೂರ್ಣವಾಗಿ ನಿರ್ಬಧಿಸಲಾಗಿದೆ.
  • ಮಾರಕ ಆಯುಧ ಹಾಗೂ ಸ್ಫೋಟಕ ವಸ್ತುಗಳನ್ನು ಪರೀಕ್ಷಾ ಆವರಣದಲ್ಲಿ ಅವಕಾಶ ಇರುವುದಿಲ್ಲ
  • ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವುದಕ್ಕೆ ನಿಷೇಧಿಸಲಾಗಿದೆ.
  • ಮಾಹಿತಿ ತಿಳಿಸಲು ಸಂಜ್ಞೆ, ಸನ್ನೆ ಮಾಡುವುದು ಸೇರಿ ಮುಂತಾದ ಕ್ರಿಯೆಗೆ ಅವಕಾಶ ಇರುವುದಿಲ್ಲ.
  • ಪರೀಕ್ಷೆ ನಡೆಯುವಾಗ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನ ನಿಷೇಧ

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?