ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ,ಸ್ಥಳದಲ್ಲೇ 5 ಸಾವು

ಚಾಮರಾಜನಗರ : ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ನಡೆದಿದೆ. ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ. ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
![]()