ಹೋಳಿಗೆ ಪ್ರಿಯರಿಗೆ ಆಹಾರ ಇಲಾಖೆಯಿಂದ ಶಾಕ್! ಹೋಳಿಗೆ ತಯಾರಿಸಲು ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ
1 min read
ಹೋಳಿಗೆ ಪ್ರಿಯರಿಗೆ ಶಾಕ್ ಎದುರಾಗಿದೆ. ಯಾಕಂದ್ರೆ ರೆಡಿಮೆಡ್ ಹೋಳಿಗೆಯೂ ನಿಮ್ಮ ಆರೋಗ್ಯಕ್ಕೆ ಕಂಟಕ ತರಬಹುದು. ಹೋಳಿಗೆ ತಯಾರು ಮಾಡುತ್ತಿದ್ದ ಅಂಗಡಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪ್ಲಾಸ್ಟಿಕ್ ಬಳಕೆ ಮಾಡಿಕೊಂಡು ಹೋಳಿಗೆ ತಯಾರಿಸುತ್ತಿರುವುದು ಪತ್ತೆಯಾಗಿದೆ. ಆಹಾರ ಇಲಾಖೆಯಿಂದ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಇಡ್ಲಿ, ಗೋಬಿ, ಕಲ್ಲಂಗಡಿ ಸೇರಿದಂತೆ ಅನೇಕ ಆಹಾರಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದು, ಕೆಲವೊಂದು ಆಹಾರ ಪದಾರ್ಥಗಳಲ್ಲಿ ಹಾನಿಕಾರ ಅಂಶ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಇದೀಗ ರೆಡಿಮೆಡ್ ಹೋಳಿಗೆ ಮೇಲೂ ಸಹ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟು.. ರೆಡಿಮೆಡ್ ಹೊಳಿಗೆ ತಯಾರು ಮಾಡುವವರಿಗೆ ಬಿಸಿ ಮುಟ್ಟಿಸಿದೆ.
ಹೋಟೆಲ್ಗಳಲ್ಲಿ ರೆಡಿಮೆಡ್ ಹೋಳಿಗೆ ಪ್ಲಾಸ್ಟಿಕ್ ಬಳಕೆ ಮಾಡ್ತಿರೋದು ಕಂಡು ಬಂದಿದೆ. ಇದರ ಬೆನ್ನಲ್ಲೇ ಅಲರ್ಟ್ ಆದ ಆರೋಗ್ಯ ಇಲಾಖೆ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. ಹಾಗೂ ಮೈಸೂರಿನ ಎರಡು ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ. ಹೋಳಿಗೆ ತಯಾರಿಸಲು ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮಾಡಲಾಗ್ತಿದೆ. ಬಿಸಿ ಬಿಸಿ ಹೋಳಿಗೆಯನ್ನು ತಯಾರಿಸಿ ಬಳಿಕ ಅದನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗುತ್ತೆ. ಹೀಗೆ ಮಾಡಿದ್ರೆ ಪ್ಲಾಸ್ಟಿಕ್ಗೆ ಶಾಖದಿಂದ ಕೆಮಿಕಲ್ ಹೊರಸೂಸಿ ಕ್ಯಾನ್ಸರ್ಗೆ ಕಾರಣ ಆಗ್ಬಹುದು. ಹೀಗಾಗಿ ಪ್ಲಾಸ್ಟಿಕ್ ಬಳಸಿದ್ರೆ ವಿಷಕಾರಿ ಅಂಶ ಹೋಳಿಗೆ ಸೇರಿವ ಸಾಧ್ಯತೆ ಇದೆ. ಇದರಿಂದ ಹೋಳಿಗೆಗೆ ಪ್ಲಾಸ್ಟಿಕ್ ಬಳಸಬಾರದು ಎಂದು ಸೂಚನೆ ನೀಡಿದ್ದಾರೆ. ಇನ್ನು ಈಗಾಗಲೇ ಆಹಾರ ಪದಾರ್ಥಗಳ ತಯಾರಿಗೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಇನ್ನೇನು ಯುಗಾದಿ ಹಬ್ಬ ಬರುತ್ತಿರುವುದರಿಂದ ಅಂಗಡಿಗಳಲ್ಲಿ ರೆಡಿಮೆಡ್ ಹೋಳಿಗಳ ಘಮ ಜೋರಾಗುತ್ತೆ. ಬಿಸಿ ಬಿಸಿ ಹೋಳಿಗೆ ಮಾಡಿ ಅದನ್ನು ಒಂದು ಪ್ಲಾಸ್ಟಿಕ್ಕ್ನಿಂದ ಕವರ್ ಮಾಡಿ ಇಡುತ್ತಾರೆ. ಆದ್ರೆ, ಅದನ್ನು ತಿನ್ನುವ ಮುನ್ನ ಸಾರ್ವಜನರು ಈ ಪ್ಲಾಸ್ಟಿಕ್ ಬಗ್ಗೆ ಎಚ್ಚರ ವಹಿಸುವುದು ಒಳಿತು.. ಕೇವಲ ಹೋಳಿಗೆ ಮಾತ್ರವಲ್ಲ.. ಯಾವುದೇ ಬಿಸಿಯಾದ ಆಹಾರ ಬಳಕೆಗೆ ಪ್ಲಾಸ್ಟಿಕ್ ಬಳಸುವುದು ತುಂಬಾ ಡೇಂಜರ್.
