ಬಾಣಂತಿಯರ ಆರೋಗ್ಯ, ಆಶಾ ಕಾರ್ಯಕರ್ತೆಯರಿಗೆ ಬಜೆಟ್‌ನಲ್ಲಿ ವಿಶೇಷ ಆದ್ಯತೆ..!
1 min read
ಬೆಂಗಳೂರು : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದಾರೆ. ಸಿಎಂ ಆಗಿ 9ನೇ ಬಜೆಟ್ ಮಂಡಿಸ್ತಿರುವ ಸಿದ್ದರಾಮಯ್ಯ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಅಗತ್ಯ ಚಿಕಿತ್ಸೆಗೆ ವಿಶೇಷ ಅನುದಾನ ನೀಡಿದ್ದಾರೆ. 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ತಾಯಂದಿರ ಆರೋಗ್ಯಕ್ಕೆ ಹಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಆರೋಗ್ಯ ಇಲಾಖೆಗೆ ಸಿಕ್ಕಿದ್ದೇನು?
ತಾಯಿ ಮರಣ ಪ್ರಮಾಣ ಶೂನ್ಯಕ್ಕಿಳಿಸಲು 320 ಕೋಟಿ ಅನುದಾನ
ಪ್ರಸೂತಿ ವೇಳೆ ತೀವ್ರ ರಕ್ತಸ್ರಾವ & ತಡೆಗಟ್ಟುವಿಕೆ ಚಿಕಿತ್ಸೆಗೆ ಅವಶ್ಯ ಉಪಕರಣ
ಹೊಸ ಡಿಜಿಟಲ್ ತಂತ್ರಜ್ಞಾನದ ಮೂಲಕ ಹೆರಿಗೆ ಸೇವೆ ಬಲವರ್ಧನೆ
ಗರ್ಭಿಣಿಯರ ರಕ್ತ ಹೀನತೆ ತಡೆಗೆ ಹಿಂದುಳಿದ ಜಿಲ್ಲೆಗಳಿಗೆ ಪೌಷ್ಠಿಕಾಂಶ ಕಿಟ್ ವಿತರಣೆ
ತಾಯಂದಿರಿಗೆ ವಾತ್ಸಲ್ಯ ಕಿಟ್ & ಪ್ರೋತ್ಸಾಹ ಧನ ವಿತರಣೆ
ಪ್ರತಿ ಆಸ್ಪತ್ರಯೆಲ್ಲಿ ಎಂಸಿಹೆಚ್ ತಜ್ಞರ ನಿಯೋಜನೆ
ಬೆಂಗಳೂರು ಉತ್ತರ ತಾಲೂಕಲ್ಲಿ 150 ಕೋಟಿ ವೆಚ್ಚದಲ್ಲಿ 200 ಹಾಸಿಗೆ ಆಸ್ಪತ್ರೆ ನಿರ್ಮಾಣ
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಯ ಉದ್ದೇಶ
ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ
ಚಿತ್ರದುರ್ಗದ ಮೊಳಕಾಲ್ಮೂರಲ್ಲಿ 200 ಹಾಸಿಗೆ ಆಸ್ಪತ್ರೆ ಘೋಷಣೆ
ಸರ್ಕಾರಿ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಉಚಿತ ಆರೋಗ್ಯ ಸೇವೆ
5 ಲಕ್ಷ ರೂ. ವೆಚ್ಚದವರೆಗಿನ ನಗದು ರಹಿತ ಚಿಕಿತ್ಸೆ ನೀಡಲು ಯೋಜನೆ
ಮಹಿಳೆಯರ ಗರ್ಭ ಕಂಠ ಕ್ಯಾನ್ಸರ್ ತಡೆಗೆ HPV ಲಸಿಕೆ ಯೋಜನೆ
ಆಶಾ ಕಾರ್ಯಕರ್ತೆಯರ ಆರೋಗ್ಯ ಧನ 1 ಸಾವಿರ ರೂ. ಹೆಚ್ಚಳ
