ಮದ್ಯಪ್ರಿಯರಿಗೆ ಕಾದಿದೆ ಬಿಗ್ ಶಾಕ್.. ದಾಖಲೆಯ 16ನೇ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ ಹೊಸ ಟಾರ್ಗೆಟ್
1 min read
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ ೧೬ನೇ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ ಹೊಸ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ೪ ಲಕ್ಷದ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಈ ವರ್ಷ ಅಬಕಾರಿ ಇಲಾಖೆಯಿಂದ ೪೦ ಸಾವಿರ ಕೋಟಿ ಆದಾಯ ಸಂಗ್ರಹಣೆ ಮಾಡುವ ಗುರಿ ಹೊಂದಿದ್ದಾರೆ.
ಕಳೆದ ಬಾರಿ ಎಷ್ಟಿತ್ತು?
೨೦೨೪-೨೦೨೫ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಯಿಂದ ೩೮ ಸಾವಿರದ ೫೦೦ ಕೋಟಿ ರೂಪಾಯಿ ಟಾರ್ಗೆಟ್ ನೀಡಲಾಗಿತ್ತು. ಕಳೆದ ಬಾರಿಯ ಈ ಟಾರ್ಗೆಟ್‌ನಲ್ಲಿ ೩೬ ಸಾವಿರದ ೫೦೦ ಕೋಟಿ ರೂಪಾಯಿ ಸಂಗ್ರಹವಾಗಿದೆ.
ಮತ್ತೆ ದರ ಏರಿಕೆ ಫಿಕ್ಸ್!
ಕಳೆದ ಬಾರಿಗಿಂತ ಈ ವರ್ಷದ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅಬಕಾರಿ ಇಲಾಖೆಗೆ ಮೂರೂವರೆ ಸಾವಿರ ಕೋಟಿ ಹೆಚ್ಚುವರಿ ಆದಾಯ ಸಂಗ್ರಹಣೆಯ ಗುರಿ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಮದ್ಯದರ ಏರಿಕೆಯ ಸೂಚನೆಯನ್ನು ರಾಜ್ಯ ಸರ್ಕಾರ ನೀಡಿದೆ.
ಬಜೆಟ್‌ನಲ್ಲಿ ಹೇಳಿದ್ದೇನು?
ಪ್ರೀಮಿಯಂ ಮದ್ಯದ ಬೆಲೆಗಳನ್ನು ನೆರೆಯ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಸಾರವಾಗಿ ಪರಿಷ್ಕರಿಸುವುದರೊಂದಿಗೆ ಸರ್ಕಾರವು ಅಬಕಾರಿ ಸ್ಟ್ರಾಬ್ ಗಳನ್ನು ತರ್ಕಬದ್ಧಗೊಳಿಸಿದೆ. ಫ್ಲ್ಯಾಬ್‌ಗಳನ್ನು ೨೦೨೫-೨೬೦ ತರ್ಕಬದ್ಧಗೊಳಿಸುವ ಮುಂದುವರಿಸಲಾಗುವುದು.ಖಾಲಿ ಅಥವಾ ಲಭ್ಯವಿರುವ ಮದ್ಯದ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು. ೨೦೨-೨೦೨೫ ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು ೩೬೫೦೦ ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದೆ. ೨೦೨೫-೨೦೨೬ ನೇ ಸಾಲಿಗೆ ೪೦,೦೦೦ ಕೋಟಿ ರೂ.ಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ.
