ಹನಿಟ್ರ್ಯಾಪ್ ಪ್ರಕರಣಕ್ಕೆ ಹೊಸ ತಿರುವು.. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಸ್..!
1 min read
ಬೆಂಗಳೂರು:ಇತ್ತೀಚೆಗೆ ಕರ್ನಾಟಕದಲ್ಲಿ ಬಜೆಟ್ ಅಧಿವೇಶನ ನಡೆದಿತ್ತು. ಈ ಕಾಲಪದಲ್ಲಿ ಸಚಿವ ಕೆಎನ್ ರಾಜಣ್ಣ ತಮ್ಮ ಮೇಲೆ ಹನಿಟ್ರ್ಯಾಪ್ಗೆ ಯತ್ನ ನಡೆದಿರುವ ಬಗ್ಗೆ ಆರೋಪಿಸಿದ್ದರು. ‘ಇದು ಗುರುತರ ಆರೋಪ ಅಂತಾ ನಾನು ಅಂದುಕೊಳ್ತೇನೆ. ತುಮಕೂರಿನ ಇಬ್ಬರು ಸಚಿವರು ಹನಿಟ್ರ್ಯಾಪ್ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳ್ತಿದ್ದಾರೆ. ಈ ಬಗ್ಗೆ ಏನೇನೋ ಕತೆಗಳು ಬರುತ್ತಿವೆ. ತುಮಕೂರಲ್ಲಿ ನಾನೊಬ್ಬ ಇದ್ದೇನೆ. ಡಾಕ್ಟರ್ ಪರಮೇಶ್ವರ್ ಕೂಡ ಇದ್ದಾರೆ. ನಾವಿಬ್ಬರೇ ಅವರ ಉದ್ದೇಶ ಅಂತಾ ನಾನು ಅಂದುಕೊಳ್ತೇನೆ. ಸಿಡಿ ಮಾಡೋದು, ಪೆನ್ ಡ್ರೈವ್ ಮಾಡೋದು.. ನಾನು ನಿಮಗೆ ಹೇಳ್ತೇನೆ. ನನಗೆ ಇರುವ ಮಾಹಿತಿ ಪ್ರಕಾರ ಸುಮಾರು 48 ಜನಗಳು ಇದ್ದಾರೆ. ಕೆಲವರು ಕೋರ್ಟ್ ಮುಖಾಂತರ ಸ್ಟೇ ತಂದುಕೊಂಡಿದ್ದಾರೆ. ಇದು ರಾಜ್ಯಕ್ಕೆ ಸೀಮಿತವಾಗಿಲ್ಲ. ರಾಷ್ಟ್ರಮಟ್ಟದ ನಾಯಕರ ಹೆಸರಲ್ಲೂ ಸಿಡಿಗಳಿವೆ. ನಾನು ಲಿಖಿತ ದೂರು ನೀಡುತ್ತೇನೆ. ಗೃಹ ಸಚಿವರು ಅದರ ಬಗ್ಗೆ ತನಿಖೆ ಮಾಡಿಸಬೇಕು’ ಎಂದು ಸದನದಲ್ಲಿ ಆಗ್ರಹಿಸಿದ್ದರು.
ರಾಜ್ಯ ರಾಜಕಾರಣದಲ್ಲಿ ಕೇಳಿಬಂದ ಹನಿಟ್ರ್ಯಾಪ್ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ವಿಚಾರಣೆ ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ಇದು ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತವಾಗಿಲ್ಲ. ಅನೇಕ ಕ್ಷೇತ್ರಗಳಲ್ಲಿರುವ ವ್ಯಕ್ತಿಗಳು ಸೇರಿ ಒಟ್ಟು 48 ಗಣ್ಯರು ಹನಿಟ್ರ್ಯಾಪ್ಗೆ ಒಳಗಾಗಿದ್ದಾರೆ ಎಂಬ ಆರೋಪ ಇದೆ. ಹೀಗಾಗಿ ನಾವು ಸಲ್ಲಿಸುತ್ತಿರುವ ಸಾರ್ವಜನಿಕ ಹಿತಾಸಕ್ತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪಿಐಎಲ್ ಸಲ್ಲಿಸಿದ ವ್ಯಕ್ತಿ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿಕೊಂಡರು. ಗಂಭೀರವಾಗಿ ಪರಿಗಣಿಸಿರುವ ನ್ಯಾಯಮೂರ್ತಿ ಖನ್ನಾ ನೇತೃತ್ವದ ಪೀಠ, ವಿಚಾರಣೆ ನಡೆಸಲು ಒಪ್ಪಿಕೊಂಡಿದೆ. ಇಂದು ಮಧ್ಯಾಹ್ನ 2.30ರ ನಂತರ ಅರ್ಜಿ ವಿಚಾರಣೆ ಸಾಧ್ಯತೆ ಇದೆ. ಒಂದು ವೇಳೆ ಇಂದು ವಿಚಾರಣೆ ನಡೆಯದಿದ್ದರೆ ನಾಳೆ, ಸುಪ್ರೀಂ ಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ.
ನನಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಂದ ಅನ್ಯಾಯ ಆಗಿದೆ. ನನ್ನ ವಿರುದ್ಧ ಅ*ತ್ಯಾಚಾರದ ಕೇಸ್ ಹಾಕಿಸಿದ್ದಾರೆ. ನೀನು ರಾಜೀನಾಮೆ ಕೊಟ್ರೆ ಜಾತಿ ನಿಂದನೆ ಕೇಸ್ ವಾಪಸ್ ಪಡೆಯುತ್ತೇನೆ ಅಂತ ಹೇಳಿದ್ರು. ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹೆಚ್.ಡಿ ರೇವಣ್ಣ ಮೇಲೂ ಇದೇ ಕುತಂತ್ರ ಮಾಡಿದ್ರು. ಈಗ ಸಚಿವ ರಾಜಣ್ಣ ಅವರ ಮೇಲೆ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರಿಗೆ ಒಂದು ಕಿವಿಮಾತು ಹೇಳ್ತೀನಿ. ನಿಮ್ಮ ಹನಿಟ್ರ್ಯಾಪ್ ಟೀಂ ನನಗೆ ಗೊತ್ತಿದೆ. ನೀವು ರಾತ್ರಿ ಮಿಟೀಂಗ್ ಮಾಡಿದ್ದು ಗೊತ್ತಿದೆ. ಡಿ.ಕೆ ಶಿವಕುಮಾರ್ ಅವರಿಗೆ ಈ ಮಹಾ ಪಾಪದ ಕೆಲಸ ಯಾಕೆ ಬೇಕು? ಎಂದು ಪ್ರಶ್ನೆ ಮಾಡಿದ್ದರು.
