c24kannada

ವಸ್ತುಸ್ಥಿತಿಯತ್ತ

ನಿರಂತರ ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಹಾಲಿನ ದರ ಏರಿಕೆಯ ಬಿಗ್‌ ಶಾಕ್

 

ನಿರಂತರ ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಹಾಲಿನ ದರ ಏರಿಕೆಯ ಬಿಗ್‌ ಶಾಕ್ ಕಾದಿದೆ. ಕೆಲ ದಿನಗಳ ಹಿಂದೆ ರಾಜ್ಯದ ರೈತರು ಕೆಎಂಎಫ್ ಮುಂದೆ ಹಾಲಿನ ದರ ಏರಿಸುವಂತೆ ಪ್ರತಿಭಟನೆ ನಡೆಸಿದ್ದರು. ಹಾಲು ಒಕ್ಕೂಟಗಳು ನಂದಿನಿ ಹಾಲಿನ ದರ ಏರಿಸುವಂತೆ ಕೆಎಂಎಫ್‌ಗೆ ಒತ್ತಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿ ರಾಜ್ಯದಲ್ಲಿ ಹಾಲಿನ ದರ ಏರಿಕೆಗೆ ಅನುಮತಿ ನೀಡುವಂತೆ ಸರ್ಕಾರ ಮನವಿ ಮಾಡಿದೆ.ಇಂದು ಸಿಎಂ ಸಿದ್ದರಾಮಯ್ಯ ಜೊತೆ KMF ಅಧಿಕಾರಿಗಳು ಮಹತ್ವದ ಸಭೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಗೆ ಇಂದೇ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ಕೆಎಂಎಫ್‌ ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಹಾಲಿನ ದರ ಏರಿಕೆ ಫಿಕ್ಸ್ ಎಂದು ಹೇಳಿತ್ತು. ನಂದಿನಿ ಹಾಲಿನ ದರ ಏರಿಕೆಗೆ ರಾಜ್ಯ ಸರ್ಕಾರ ಕೂಡ ತಯಾರಿ ನಡೆಸುತ್ತಾ ಇದ್ದು, ಶೀಘ್ರವೇ ಪ್ರತಿ ಲೀಟರ್ ಹಾಲಿನ ದರ ಬಹುತೇಕ 5 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ.

 

 

ರಾಜ್ಯ ಸರ್ಕಾರಕ್ಕೆ ಕೆಎಂಎಫ್‌ ಪ್ರತಿ ಲೀಟರ್‌ಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಕಳಿಸಿದೆ. ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಜೊತೆ ಹಾಲಿನ ದರ ಏರಿಕೆ ವಿಚಾರವಾಗಿ ಸಭೆ ನಡೆಸಲಿದ್ದಾರೆ.ಈಗಾಗಲೇ ಕೆಎಂಎಫ್ ಹಾಲಿನ ದರ ಏರಿಕೆಯ ಸಾಧಕ ಭಾದಕಗಳ ಬಗ್ಗೆ ಹಾಲು ಒಕ್ಕೂಟದ ಜೊತೆ ಸಭೆ ನಡೆಸಿದೆ. ಕೆಎಂಎಫ್ ಆಡಳಿತ ಮಂಡಳಿ ಸದ್ಯ ಮುಖ್ಯಮಂತ್ರಿ ಅನುಮತಿಗಾಗಿ ಮಾತ್ರ ಕಾಯುತ್ತಿದೆ. ಸಿಎಂ ಕಡೆಯಿಂದ ಗ್ರೀನ್‌ಸಿಗ್ನಲ್ ಸಿಕ್ಕ ಬೆನ್ನಲ್ಲೇ ಹಾಲಿನ ದರ ಏರಿಕೆಯ ಘೋಷಣೆ ಮಾಡಲಾಗುತ್ತದೆ. ಕಳೆದ ವರ್ಷ ಜೂನ್‌ನಲ್ಲಿ ಕೆಎಂಎಫ್‌, ಪ್ರತಿ ಲೀಟರ್‌ಗೆ 2 ರೂಪಾಯಿ ಹಾಲಿನ ದರ ಏರಿಕೆ ಮಾಡಿತ್ತು. ಇದೀಗ ಪ್ರತಿ ಲೀಟರ್‌ಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಕಳಿಸಿದೆ. ಸಿಎಂ ಸಿದ್ದರಾಮಯ್ಯ ನಡೆಸುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!