ಕುಖ್ಯಾತ ರೌಡಿ ಶೀಟರ್ ಹೆಬ್ಬಗೋಡಿಯ ನೇಪಾಳಿ ಮಂಜನ ಬರ್ಬರ ಕೊಲೆ.
1 min read
ಕುಖ್ಯಾತ ರೌಡಿ ಶೀಟರ್ ನೇಪಾಳಿ ಮಂಜನ ಕೊಲೆ.
ಬೆಂ,ಆನೇಕಲ್,31: ಮಂಜ ಯಾನೆ ನೇಪಾಳಿ ಮಂಜನನ್ನ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ. ತಾಲೂಕಿನ ಹೆಬ್ಬಗೋಡಿ-ಗೊಲ್ಲಹಳ್ಳಿ ಮುಖ್ಯ ರಸ್ತೆಯ ನಿರ್ಜನ ಪ್ರದೇಶದಲ್ಲಿ ಸ್ನೇಹಿತರ ಜೊತೆ ಮದ್ಯ ಸೇವನೆ ಸಂದರ್ಭದಲ್ಲಿ ಹೊಂಚು ಹಾಕಿ ಕೊಲೆಗೈಯ್ಯಲಾಗಿದೆ.
ಲಾಂಗು ಮಚ್ಚುಗಳಿಂದ ತಲೆ, ಹೊಟ್ಟೆ, ಎದೆ ಕೈಗಳು ಹೀಗೆ ಸಿಕ್ಕ ಸಿಕ್ಕ ಕಡೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಹೆಬ್ಬಗೋಡಿ ರೌಡಿಶೀಟರ್ ಜಗ್ಗ ಅಲಿಯಾಸ್ ಜಗದೀಶ್ ಮತ್ತವನ ಗ್ಯಾಂಗ್ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.ಇನ್ನು ಕೊಲೆಯಾದ ನೇಪಾಳಿ ಮಂಜ ರೌಡಿಸಂ ಸಹವಾಸ ಬೇಡ ಎಂದು ಇತ್ತೀಚೆಗೆ ಕುಟುಂಬ ಸಮೇತ ದೂರದ ಕುಣಿಗಲ್‍ಗೆ ಶಿಫ್ಟ್ ಆಗಿದ್ದ. ಯುಗಾದಿ ಹಬ್ಬ ಹಿನ್ನೆಲೆ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಲು ಊರಿಗೆ ಬಂದಿದ್ದು, ರಾತ್ರಿ 10:45 ರ ಸುಮಾರಿಗೆ ಕೊಲೆ ನಡೆದಿದೆ. ಪರಿಚಿತರಿಂದಲೇ ಕೊಲೆಯಾಗಿರುವ ಶಂಕೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ತಿಳಿಸಿದ್ದಾರೆ.ಎರಡು ಕೊಲೆ ಸೇರಿದಂತೆ ಕೊಲೆ ಯತ್ನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮೃತ ನೇಪಾಳಿ ಮಂಜ ಪ್ರಮುಖ ಆರೋಪಿಯಾಗಿದ್ದ. ಎರಡು ಬಾರಿ ಗೂಂಡಾ ಕಾಯ್ದೆ ಅಡಿ ಆತನನ್ನು ಬಂಧಿಸಲಾಗಿತ್ತು. ಕಳೆದ ಚುನಾವಣೆ ವೇಳೆ ಗಡಿಪಾರು ಕೂಡ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ಕೈದು ಮಂದಿ ಸ್ನೇಹಿತರ ಜೊತೆಯಿದ್ದ ಮಂಜನನ್ನು
ಎರಡು ಬೈಕ್ ಗಳಲ್ಲಿ ಬಂದು ಏಕಾಏಕಿ ನೇಪಾಳಿ ಮಂಜನ ಮೇಲೆ ದಾಳಿ ನಡೆಸಿದ್ದರು. ದಾಳಿಗೆ ಹೆದರಿ ಸ್ನೇಹಿತರು ಪರಾರಿಯಾಗಿದ್ದು ನೇಪಾಳಿ ಮಂಜನೊಬ್ಬನೇ ಹಂತಕರ ಕೈಗೆ ಸಿಕ್ಕಿ ಬಿದ್ದಿದ್ದ.
ಲಾಂಗು, ಮಚ್ಚುಗಳಿಂದ ರೌಡಿ ಶೀಟರ್ ನೇಪಾಳಿ ಮಂಜನನ್ನು ಬರ್ಬರವಾಗಿ ಹತ್ಯೆಗೈದು ಬೈಕ್ ಗಳಲ್ಲಿ ಪರಾರಿಯಾಗಿದ್ದಾರೆ.
ಹಳೆ ವೈಷಮ್ಯ ಹಿನ್ನಲೆ ಕೊಲೆಯಾಗಿದೆ ಎಂದು ಪೊಲೀಅ್ ಮೂಲಗಳು ತಿಳಿಸಿವೆ.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ 12 ಕ್ಕೂ ಹೆಚ್ಚು
ಕೊಲೆ, ಕೊಲೆ ಯತ್ನ, ರಾಬರಿ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು ರೌಡಿ ಶೀಟರ್ ಆಗಿದ್ದು, ಎರಡು ಬಾರಿ ಗೂಂಡಾ ಅಕ್ಟ್ ಹಾಕಿದ್ರು ಬುದ್ದಿ ಬಂದಿರಲಿಲ್ಲ. ಕಳೆದ ತಿಂಗಳು ಹೆಬ್ಬಗೋಡಿ ರೌಡಿ ಪರೇಡ್ ನಲ್ಲಿ ನೇಪಾಳಿ ಮಂಜನಿಗೆ ಹೊಸ ಇನ್ಸಪೆಕ್ಟರ್ ಎಚ್ಚರಿಕೆ ನೀಡಿದ್ದರು.
ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ, ಶ್ವಾನದಳ, ಸೋಕೋ ಟೀಮ್ ಭೇಟಿ ನೀಡಿದೆ. ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ
