ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕು..ಕರ್ನಾಟಕದಲ್ಲಿ ಒಂದು ವಾರ ಮಳೆ.. 11 ಜಿಲ್ಲೆಗಳಿಗೆ ಎಚ್ಚರಿಕೆ..!
1 min read
ಇಂದಿನಿಂದ ಒಂದು ವಾರ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡ ಹಿನ್ನೆಲೆಯಲ್ಲಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಬೀಳಲಿದೆ. ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಎಂದಿದೆ ಹವಾಮಾನ ಇಲಾಖೆ
ಏಪ್ರಿಲ್ 3, 4, 5 ರಂದು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗುವುದು. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಮಳೆ ಬೀಳಲಿದೆ. ಈ ಭಾಗದಲ್ಲೂ ಮಳೆಯ ಮುಂಜಾಗೃತ ಕ್ರಮಗಳನ್ನ ಕೈಕೊಳ್ಳಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
