ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಕಾರ್ಖಾನೆ
1 min read
ಬೆಳಗಾವಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರ್ಖಾನೆ ಹೊತ್ತಿ ಉರಿದಿರುವ ಘಟನೆ ಬೆಳಗಾವಿಯ ಭಾಗ್ಯನಗರದಲ್ಲಿ ನಡೆದಿದೆ. ರಾತ್ರಿಯಾಗಿದ್ದರಿಂದ ಕಾರ್ಮಿಕರು ಇಲ್ಲದ ವೇಳೆ ಅವಘಡ ಸಂಭವಿಸಿದೆ. ಯಾವುದೇ ಪ್ರಾಣ ಹಾನಿಯಾಗಿರುವುದಿಲ್ಲ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ಕೈಗೊಂಡು ಕತ್ತಲಲ್ಲೇ ಬೆಂಕಿ ನಂದಿಸಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
