[t4b-ticker]

ಪೊಲೀಸ್​ ಆಯುಕ್ತರನ್ನೇ ಬಿಡದ ಸೈಬರ್​ ಖದೀಮರು: ಬಿ ದಯಾನಂದ ಹೆಸ್ರಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿದ ಖದೀಮರು

1 min read
Share it

 

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರ ಹೆಸರಿನಲ್ಲಿ ಸೈಬರ್  ಖದೀಮರು ನಕಲಿ ಫೇಸ್​ಬುಕ್​ ಖಾತೆ ತೆರೆದಿದ್ದಾರೆ.  ಹಿಂದಿ ಭಾಷೆಯಲ್ಲಿ ಖಾತೆಯನ್ನು ತೆರೆಯಲಾಗಿದ್ದು, ಹಲವರಿಗೆ ರಿಕ್ವೆಸ್ಟ್ ಕಳುಹಿಸಲಾಗಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇತ್ತೀಚೆಗೆ ಕೂಡ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರ ಹೆಸರಿನಲ್ಲೇ ನಕಲಿ ವಾಟ್ಸ್‌ಆ್ಯಪ್‌ ಖಾತೆ ತೆರೆದಿದ್ದ ಖದೀಮರು ವಂಚನೆಗೆ ಮುಂದಾಗಿದ್ದರು. ನಕಲಿ ವಾಟ್ಸ್‌ಆ್ಯಪ್‌ ಖಾತೆ ತೆರೆದಿದ್ದ ಖದೀಮರು ಪೊಲೀಸ್‌ ಕಮಿಷನರ್‌ ಪೋಟೋವನ್ನು ವಾಟ್ಸ್‌ ಆ್ಯಪ್​ ಡಿಪಿಗೆ ಹಾಕಿದ್ದರು.‌

 

 

ನಾನು ಬಿ.ದಯಾನಂದ್‌, ಬೆಂಗಳೂರು ಪೊಲೀಸ್‌ ಕಮಿಷನರ್‌ ಎಂದು ಆಪ್ತರಿಗೆ, ಸಾರ್ವಜನಿಕರಿಗೆ, ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಹಲವು ಜನರಿಗೆ ಮೆಸೇಜ್​ ಕಳುಹಿಸಿದ್ದಾರೆ.  ಆ ಮೂಲಕ ಕಮಿಷನರ್‌ ಹೆಸರಲ್ಲಿ ಹಣ ವಸೂಲಿಗೆ ಮುಂದಾಗಿದ್ದರು ಎಂದು ಶಂಕಿಸಲಾಗಿದೆ.  ಬಳಿಕ ಈ ವಿಚಾರ ಸೈಬರ್‌ ಕ್ರೈಂ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ನಕಲಿ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದರು.  ಸೈಬರ್‌ ಕ್ರೈಂ ಪೊಲೀಸರಿಂದ ಆರೋಪಿಗಾಗಿ ಶೋಧ ನಡೆಯುತ್ತಿದೆ.

 

ಕರ್ನಾಟಕದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಆಯುಕ್ತ ಬಿ ದಯಾನಂದ ಹೇಳಿದ್ದರು. ಸರ್ಕಾರಿ ಅಧಿಕಾರಿಗಳಂತೆ ನಟಿಸಿ ನಿಮ್ಮನ್ನು ಯಾಮಾರಿಸಬಹುದು. ಹಣಕ್ಕೆ ಬೇಡಿಕೆ ಇಡಬಹುದು. ಹಾಗಾಗಿ ಎಚ್ಚರಿಕೆಯಿಂದ ಇರುವಂತೆ ಹೇಳಿದರು.  ಡಿಜಿಟಲ್ ಅರೆಸ್ಟ್​ ಎಂಬ ಪರಿಕಲ್ಪನೆಯೂ ಭಾರತೀಯ ಕಾನೂನು ಅಥವಾ ಸಂವಿಧಾನದಲ್ಲಿ ಅಸ್ತಿತ್ವದಲ್ಲಿಲ್ಲ ಎಂದು ಆಯುಕ್ತ ದಯಾನಂದ ಸ್ಪಷ್ಟಪಡಿಸಿದರು. ಪೊಲೀಸ್ ಕ್ರಮಗಳನ್ನು ಕಾನೂನುಗಳಿಂದ ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತದೆ. ನೋಟಿಸ್ ಅಥವಾ ದೈಹಿಕವಾಗಿ ಮಾತ್ರ ಬಂಧಿಸಿಲಾಗುತ್ತದೆ. ನಂತರ 24 ಗಂಟೆಗಳ ಒಳಗೆ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದರು.

 

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?