5 ವರ್ಷದ ಬಾಲಕಿ ಜೀವ ತೆಗೆದ ಆರೋಪಿಗೆ ಗುಂಡೇಟು.. ಚಿಕಿತ್ಸೆ ಫಲಿಸದೇ ಸಾವು
1 min read
ಹುಬ್ಬಳ್ಳಿ : ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾದ ಆರೋಪಿ ಮೇಲೆ ಗುಂಡು ಹಾರಿಸಲಾಗಿದೆ. ಇದರಿಂದಾಗಿ ಆರೋಪಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಪೊಲೀಸ್ ಗುಂಡೇಟಿಗೆ ಸಾವನ್ನಪ್ಪಿದ್ದಾನೆ. ಬಾಲಕಿ ಕೊಲೆ ಪ್ರಕರಣದಲ್ಲಿ ಎಸ್ಕೇಪ್ ಆಗಿದ್ದ ಬಿಹಾರಿಯನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆನೇ ಆರೋಪಿ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಓರ್ವ ಪಿಎಸ್‌ಐ, ಇಬ್ಬರೂ ಸಿಬ್ಬಂದಿಗಳಿಗೆ ಗಾಯಗಳಾಗಿವೆ.
ಆರೋಪಿಯನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆನೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಪ್ರಯತ್ನ ನಡೆದಿದೆ. ಹೀಗಾಗಿ ಆತ್ಮರಕ್ಷಣೆಗಾಗಿ ಬಾಲಕಿ ಹಂತಕನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಳಿಕ ಆತ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಪೊಲೀಸರನ್ನು ಕೀಮ್ಸ್ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವ್ಯಕ್ತಿಯೋರ್ವ ಬಾಲಕಿಯನ್ನು ಶೆಡ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದಾಗ ಬಾಲಕಿ ಕೂಗಾಡಿದ್ದಾಳೆ. ಆಗ ಸ್ಥಳೀಯರು ಶೆಡ್‌ನತ್ತ ಧಾವಿಸಿದ್ದಾರೆ. ಸ್ಥಳೀಯರು ಧಾವಿಸುತ್ತಿದ್ದಂತೆ ಭಯಬಿದ್ದ ಆರೋಪಿ ಬಾಲಕಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಅಶೋಕನಗರ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಅಲ್ಲದೆ ಆರೋಪಿ ಬಂಧನಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆಯ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಕೊಲೆಗಡುಕನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೊಲೆಗಡುಕನಿಗೆ ಗಲ್ಲು ಶಿಕ್ಷೆ ವಿಧಿಸಿ, ಎನ್‌ಕೌಂಟರ್ ಮಾಡಿ ಅಥವಾ ನಮ್ಮ ಕೈಗೆ ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಮನೆ ಮುಂದೆ ಆಟ ಆಡುತ್ತಿದ್ದ ಪುಟ್ಟ ಬಾಲಕಿಯನ್ನು ಕಾಮುಕ ಎತ್ತಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲೂ ಸೆರೆಯಾಗಿದೆ.
ಅಲ್ಲದೆ ಆರೋಪಿ ಬಂಧನಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆಯ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಕೊಲೆಗಡುಕನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೊಲೆಗಡುಕನಿಗೆ ಗಲ್ಲು ಶಿಕ್ಷೆ ವಿಧಿಸಿ, ಎನ್‌ಕೌಂಟರ್ ಮಾಡಿ ಅಥವಾ ನಮ್ಮ ಕೈಗೆ ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಮನೆ ಮುಂದೆ ಆಟ ಆಡುತ್ತಿದ್ದ ಪುಟ್ಟ ಬಾಲಕಿಯನ್ನು ಕಾಮುಕ ಎತ್ತಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲೂ ಸೆರೆಯಾಗಿದೆ.
ಬೆಳಗ್ಗೆ ಬಾಲಕಿ ತಾಯಿ ಮನೆ ಕೆಲಸಕ್ಕೆ ಹೋಗಿದ್ದಳು. ಅಲ್ಲಿ ಬಾಲಕಿಯನ್ನು ಆಟ ಆಡಲು ಬಿಟ್ಟು ತಾಯಿ ಮನೆ ಕೆಲಸ ಮಾಡುತ್ತಿದ್ದರು. ಈ ಸಮಯದಲ್ಲಿ ವ್ಯಕ್ತಿಯೊಬ್ಬ ಬಾಲಕಿಯನ್ನು ಎತ್ತಿಕೊಂಡು ಹೋಗಿದ್ದಾನೆ. ಅತ್ಯಾಚಾರಕ್ಕೆ ಮುಂದಾದಾಗ ಬಾಲಕಿ ಕಿರುಚಾಡಿದ್ದಾಳೆ. ಆಗ ಭಯ ಬಿದ್ದ ಆರೋಪಿ ಬಾಲಕಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಸ್ಥಳೀಯರು ಆಗಮಿಸುವ ಹೊತ್ತಿಗೆ ಎಸ್ಕೇಪ್ ಆಗಿದ್ದಾನೆ. ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕಿ ಮೇಲೆ ಅತ್ಯಾಚಾರ ನಡೆದಿದಿಯಾ ಎನ್ನುವುದು ಗೊತ್ತಾಗಲಿದೆ. ಆದರೆ ಆಕ್ರೋಶಗೊಂಡ ಕುಟುಂಬಸ್ಥರು ಸ್ಥಳೀಯರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ತನಿಖೆಯನ್ನು ತೀವ್ರಗೊಳಿಸಿದ ಪೊಲೀಸರಿಗೆ ಆರೋಪಿ ಇರುವ ಸ್ಥಳ ಗೊತ್ತಾಗಿದೆ. ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದಾಗ ಪೊಲೀಸರ ಮೇಲೆ ಆತ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ ಬೆನ್ನಲ್ಲೆ ಆತ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ.
