January 29, 2026

c24kannada

ವಸ್ತುಸ್ಥಿತಿಯತ್ತ

500ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ವಿಧಿವಶ

Share it

 

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ.ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದ  ನಟ ಬ್ಯಾಂಕ್‌ ಜನಾರ್ಧನ್‌ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಲವು ದಿನಗಳಿಂದ ಬ್ಯಾಂಕ್ ಜನಾರ್ಧನ್‌ ಅನಾರೋಗ್ಯದಿಂದ ಬಳಲುತ್ತಿದ್ದರು. ಮೂರು ಬಾರಿ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಚಿಕಿತ್ಸೆಗಾಗಿ ಅವರನ್ನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬ್ಯಾಂಕ್ ಜನಾರ್ಧನ್ ಸಾವನ್ನಪ್ಪಿದ್ದಾರೆ.ಬ್ಯಾಂಕ್ ಜನಾರ್ಧನ್‌ ಸಾವಿನ ಸುದ್ದಿ ಕೇಳಿ ಸ್ಯಾಂಡಲ್​ವುಡ್ ನಟ ನಟಿಯರು, ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

 

ನಟ ಬ್ಯಾಂಕ್ ಜನಾರ್ಧನ್ ಅವರು 1948ರಲ್ಲಿ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು.ಬ್ಯಾಂಕ್ ಜನಾರ್ದನ್ ಅವರು ಹೊಳಲ್ಕೆರೆಯಲ್ಲೇ ತಮ್ಮ ಬಾಲ್ಯ ಕಳೆದಿದ್ದರು. ಬಳಿಕ ಅಲ್ಲಿಯೇ ಬ್ಯಾಂಕ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಶಾಲೆ ಹಾಗೂ ಕಾಲೇಜು ದಿನಗಳಲ್ಲೇ ನಾಟಕದ ಗೀಳು ಅಂಟಿಸಿಕೊಂಡಿದ್ದರು. ನಾಟಕಗಳಲ್ಲಿ ಅಭಿನಯ ಮಾಡುತ್ತಾ 1991ರಿಂದ ಸಿನಿಮಾರಂಗದ ಕಡೆ ಮುಖ ಮಾಡಿದ್ದರು. ಬ್ಯಾಂಕ್ ಜನಾರ್ದನ್ ಕನ್ನಡದ ಪ್ರಖ್ಯಾತ ಹಾಸ್ಯನಟರಲ್ಲಿ ಒಬ್ಬರಾಗಿದ್ದಾರೆ.ಶಂಕರ್‌ನಾಗ್, ಅನಂತ್‌ನಾಗ್, ರವಿಚಂದ್ರನ್, ಜಗ್ಗೇಶ್, ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಹೀಗೆ ಘಟಾನುಘಟಿಗಳ ಜೊತೆಗೆ ನಟಿಸಿ ಪ್ರಖ್ಯಾತಿ ಹೊಂದಿದ್ದರು. ನಟ ಬ್ಯಾಂಕ್ ಜನಾರ್ದನ್ ಅಭಿನಯದ ಶ್! ತರ್ಲೆ ನನ್ಮಗ, ಸೂಪರ್ ನನ್ ಮಗ, ಭಂಡ ನನ್ ಗಂಡ ಬಾಕ್ಸ್ ಆಫೀಸ್‌ನಲ್ಲಿ ಧೂಳ್ ಎಬ್ಬಿಸಿತ್ತು. ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದರು. ಇಷ್ಟೇ ಅಲ್ಲದೇ ಪಾಪಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲೂ ನಟಿಸಿದ್ದರು.

Loading

Leave a Reply

Your email address will not be published. Required fields are marked *

error: Content is protected !!