c24kannada

ವಸ್ತುಸ್ಥಿತಿಯತ್ತ

ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕ್ರಮಕ್ಕೆ ಮೊದಲ ಹೆಜ್ಜೆಯಿಟ್ಟ ಅವಲಹಳ್ಳಿ ಪೊಲೀಸರು..!

ಕನ್ನಡಿಗರಿಗೆ ಅವಮಾನ ಮತ್ತು ವಿವಿಧ ಭಾಷೆಯ ಜನರ ನಡುವೆ ದ್ವೇಷ ಹುಟ್ಟಿಸಲು ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಗಾಯಕ ಸೋನು ನಿಗಮ್  ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವಲಹಳ್ಳಿ ಪೊಲೀಸರು ಸೋನು ನಿಗಮ್​ಗೆ ನೋಟಿಸ್ ಜಾರಿ ಮಾಡಿದ್ದಾರೆ.  ಇಂದು ರಿಜಿಸ್ಟರ್ ಪೋಸ್ಟ್ ಮೂಲಕ ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ ಒಂದು ವಾರದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಕಾರ್ಯಕ್ರಮ ಆಯೋಜಕರಿಗೂ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ಯಾವ ಕಂಟ್ರಾಕ್ಟ್ ಮೇಲೆ ಕಾರ್ಯಕ್ರಮಕ್ಕೆ ಬಂದಿದ್ರು. ಎಷ್ಟು ಗಂಟೆಗಳ ಕಾರ್ಯಕ್ರಮ, ಬೇರೆ ಯಾರು ಅವರ ಜೊತೆಯಲ್ಲಿ ಇದ್ದರು. ಸೋನು ನಿಗಮ್ ಆಗಮಿಸಿದ್ದ ಬಗ್ಗೆ ಖಚಿತತೆ ಪಡಿಸಿಕೊಳ್ಳಲು ನೋಟಿಸ್ ನೀಡಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!