ಭೀಕರ ರಸ್ತೆ ಅಪಘಾತ..ಕಾರ್ ಲಾರಿ ನಡುವೆ ಡಿಕ್ಕಿ, ಒಂದೇ ಕುಟುಂಬದ 5 ಜನ ದುರ್ಮರಣ
1 min read
ಹುಬ್ಬಳ್ಳಿ :ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿಯ ಇಂಗಳಹಳ್ಳಿ ಕ್ರಾಸ್ ಬಳಿಯಲ್ಲಿ ಇಂದು ಮುಂಜಾನೆ ನಡೆದಿದೆ.
ವೈ- ಶ್ವೇತಾ (29), ಅಂಜಲಿ (26),ಸಂದೀಪ್ (26), ವಿಠ್ಠಲ್ (55), ಶಶಿಕಲಾ (40) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬಾಗಲಕೋಟಿಯಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ನಿಶ್ಚಿತಾರ್ಥ ಹಿನ್ನಲೆ ಮರಳಿ ಬರುವಾಗ ಈ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟವರನ್ನು ಹುಬ್ಬಳ್ಳಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
