ರಾಜ್ಯದಲ್ಲಿರೋ ಪಾಕಿಸ್ತಾನ ಪ್ರಜೆಗಳ ಹೊರ ದಬ್ಬಲು ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಬಿಜೆಪಿ
1 min read
https://youtu.be/nIMpyXRRDFY?si=yI57aR4cWxhDgSg6ಧಾರವಾಡ : ಕೇಂದ್ರ ಸರ್ಕಾರದ ನಿರ್ದೇಶನವಿದ್ದರು ಪಾಕಿಸ್ತಾನದ ಪ್ರಜೆಗಳನ್ನು ರಾಜ್ಯದಿಂದ ಹೊರಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಹಾಗೂ ಈ ಕೂಡಲೇ ಪಾಕಿಸ್ತಾನ ಪ್ರಜೆಗಳನ್ನು ಹೊರ ಹಾಕುವಂತೆ ಆಗ್ರಹಿಸಿ, ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಡನೆ ಮಾಡಿ ರಾಜ್ಯ ಕೈ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ವೈ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಸಜ್ಉ ಕಾಂಗ್ರೆಸ್ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ದೇಶದ ಬೇರೆ ಬೇರೆ ರಾಜ್ಯಗಳಲ್ಲಿದ್ದ ಪಾಕಿಸ್ತಾನದ ಪ್ರಜೆಗಳು ಈಗಾಗಲೇ ದೇಶ ಬಿಟ್ಟು ಹೋಗುತ್ತಿದ್ದಾರೆ. ಕರ್ನಾಟಕದಲ್ಲೂ ಅನೇಕ ಪಾಕಿಸ್ತಾನ ಪ್ರಜೆಗಳಿದ್ದು, ಅವರು ದೇಶ ಬಿಟ್ಟು ಹೋಗಲು ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂಬ ಪರೋಕ್ಷ ಹೇಳಿಕೆಯನ್ನು ಸಿಎಂ ಹೇಳುವ ಮೂಲಕ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಕೂಡಲೇ ರಾಜ್ಯದಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ರಾಜ್ಯ ಬಿಟ್ಟು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.
