ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ’ – ಸಿ.ಎಂ ಸಿದ್ದರಾಮಯ್ಯ ಸೂಚನೆ

1 min read
Share it

ಬೆಂಗಳೂರು : ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು: ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ, ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು, ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ: ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಿ ಎಂದು  ಅಧಿಕಾರಿಗಳಿಗೆ ಖಡಕ್ ಆಗಿ ಸೂಚಿಸಿದರು.

 

ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸಿಎಂ  ಸೂಚನೆ ನೀಡಿದರು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದು ಹೇಳಿದರು.

 

• ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ.

• ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು.

• ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸೂಚನೆ ನೀಡಲಾಗಿದೆ.

• ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಲು ಸೂಚನೆ.

• ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು.

*ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.

•ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು.

• ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು.

• ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು.

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?