ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ಹಾಸ್ಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ
1 min read
ಕಾಮಿಡಿ ಕಿಲಾಡಿಗಳು ಸೀಸನ್ 3ರಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ನಟ ರಾಕೇಶ್ ಪೂಜಾರಿ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ.
ನಟ ರಾಕೇಶ್ ಪೂಜಾರಿ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ನಾಯಕ ಏಜೆಯ ಪಿಎ ವಿರೂಪಾಕ್ಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ರಾಕೇಶ್ ಕನ್ನಡದಲ್ಲಿ ಪೈಲ್ವಾನ್, ಇದು ಎಂಥಾ ಲೋಕವಯ್ಯ ಮತ್ತು ತುಳುವಿನಲ್ಲಿ ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೋಕ್ಕೆಲ್ ಮುಂತಾದ ನಾಟಕಗಳು, ಸ್ಕಿಟ್ಗಳು ಮತ್ತು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕರಾವಳಿಯ ರಿಯಾಲಿಟಿ ಶೋಗಳಾದ ಬಲೆ ತೇಲಿಪಾಲೆ, ಮೇ 22, ಸ್ಟಾರ್, ತುಯಿನಾಯೆ ಪೋಯೆ ಇತ್ಯಾದಿ ನಾಟಕದಲ್ಲಿ ಅಭಿನಯಿಸಿದ್ದಾರೆ.
