ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರ ದುರಂತ ಅಂತ್ಯ
1 min read
ಸಿರಗುಪ್ಪ : ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ದಾರುಣ ಅಂತ್ಯವಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಭೀರಪ್ಪ (45), ಸುನೀಲ (26) ಮೃತ ದುರ್ದೈವಿಗಳು. ವಿನೋದ (14) ಸ್ಥಿತಿ ಗಂಭೀರವಾಗಿದೆ. ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ದುರಂತ ಸಂಭವಿಸಿದೆ. ಮಳೆ ಬಂದಾಗ ಗಿಡದ ಆಶ್ರಯ ಪಡೆದಿದ್ದ ಇವರ ಮೇಲೆ ಯಮನಂತೆ ಬಂದು ಸಿಡಿಲು ಅಪ್ಪಳಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
ಇಂದು ಸಂಜೆ ವೇಳೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರು ಕೂಡ ಹೊರತಾಗಿಲ್ಲ. ಶಿವಮೊಗ್ಗ ಬಾಗಲಕೋಟೆ, ವಿಜಯಪುರ,ಚಿಕ್ಕಮಗಳೂರು, ವಿಜಯನಗರ, ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾದ ವರದಿಯಾಗಿದೆ.
