ಸಾರ್ವಜನಿಕರಿಗೆ ಇದ್ದು ಇಲ್ಲದಂತಾಗಿದೆ ಕಸ ವಿಲೇವಾರಿ ಘಟಕ.. ಕಸದ ರಾಶಿಯಿಂದ ರೋಗ ಹರಡುವ ಭೀತಿ
1 min read

ಮಧುಗಿರಿ : ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕಸ ವಿಲೇವಾರಿ ಘಟಕ ಸಾರ್ವಜನಿಕರಿಗೆ ಇದ್ದು ಇಲ್ಲದಂತಾಗಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ರಾಜೀವ್ ಗಾಂಧಿ ಕ್ರೀಡಾಂಗದಲ್ಲಿ ಸಾರ್ವಜನಿಕರು ಕಸವನ್ನು ಹಾಕುತ್ತಿದ್ದಾರೆ. ಕ್ರೀಡಾಂಗಣ ಪಕ್ಕದಲ್ಲಿ ಶೌಚಾಲಯ ಇದ್ದರೂ ಕೂಡ ತ್ಯಾಜ್ಯ ವಸ್ತುಗಳನ್ನು ಸಾರ್ವಜನಿಕರು ಬಿಸಾಡುತ್ತಿದ್ದರು ಪಾಲಿಕೆ ಯವರು ಕ್ಯಾರ ಎನ್ನುತ್ತಿಲ್ಲ, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು.
ಕಸವನ್ನು ವೈಜ್ಞಾನಿಕವಾಗಿ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ವಿಲೇವಾರಿ ಮಾಡುವುದರ ಮೂಲಕ ಕಸದಿಂದ ರಸ ತೆಗೆದು ಲಾಭ ಮಾಡಿಕೊಳ್ಳುವ ಯೋಜನೆ ಇಲ್ಲಿ ಸಂಪೂರ್ಣ ಹಳ್ಳ ಹಿಡಿದಿದೆ. ಗಣತ್ಯಾಜ್ಯ ವಿಲೇವಾರಿ ಘಟಕ ಕೇವಲ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಕಸ ವಿಲೇವಾರಿ ವೈಜ್ಞಾನಿಕವಾಗಿ ನಡೆಯದ ಕಾರಣ ಪರಿಸರದ ಮೇಲೆ ಭಾರಿ ಪ್ರಮಾಣದ ದುಷ್ಪರಿಣಾಮ ಬೀರುತ್ತವೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು.
![]()

