ಮಹೇಂದ್ರ TUV, ಲಾರಿ, VRL ಬಸ್ ಮಧ್ಯೆ ಸರಣಿ ಅಪಘಾತ; ಸ್ಥಳದಲ್ಲೇ ಪ್ರಾಣಬಿಟ್ಟ ಆರು ಮಂದಿ

1 min read
Share it

 

ವಿಜಯಪುರ: ಮಹೇಂದ್ರ ಟಿಯುವಿ 300 ಕಾರು, ಲಾರಿ, ಖಾಸಗಿ ಬಸ್ (VRL) ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಪ್ರಾಣ ಬಿಟ್ಟಿರುವ ಘಟನೆ  ವಿಜಯಪುರ  ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಎನ್ ಎಚ್ 50ರಲ್ಲಿ ಈ ಘಟನೆ ಸಂಭವಿಸಿದೆ,   ಕಾರಿನಲ್ಲಿದ್ದ ಐವರು ಹಾಗೂ ಖಾಸಗಿ ಬಸ್​ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

ಈ ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ, ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತದ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?