ಮುನಿಯೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ.. ಅಧ್ಯಕ್ಷರಾಗಿ ಕಾವ್ಯ ಮಂಜುನಾಥ್ ಆಯ್ಕೆ
1 min read
ತುರುವೇಕೆರೆ : ತಾಲ್ಲೂಕಿನ ಮುನಿಯೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು, ಈ ಹಿಂದೆ ಇದ್ದಂತಹ ಅಧ್ಯಕ್ಷೆ ಟಿ, ಲಕ್ಷ್ಮಿ ಅವರು ರಾಜೀನಾಮೆ ನೀಡಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಎನ್ ಡಿ ಎ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿಯಾಗಿ ಕಾವ್ಯಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾದರು. 16 ಸದಸ್ಯರುಳ್ಳ ಪಂಚಾಯಿತಿಯಲ್ಲಿ 5 ಸದಸ್ಯರ ಗೈರು ಹಾಜರಿ ಇದ್ದು ಉಳಿದ ಎಲ್ಲಾ ಸದಸ್ಯರು ಕಾವ್ಯಮಂಜುನಾಥ್ ಅವರ ಪರ ಬೆಂಬಲಿಸಿದ ಹಿನ್ನೆಲೆ, ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೈ ಶಿವರಾಜಯ್ಯ ಅವರು ಚುನಾವಣಾ ಪ್ರಕ್ರಿಯೆ ಮುಗಿಸಿ, ಕಾವ್ಯ ಮಂಜುನಾಥ್ ಅವರನ್ನು ಮುನಿಯೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರನ್ನಾಗಿ ಘೋಷಿಸಿದರು.
ನೂತನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದ ಕಾವ್ಯ ಮಂಜುನಾಥ್ ಮಾತನಾಡಿ, ಸರ್ವ ಸದಸ್ಯರ ಸಹಕಾರದಿಂದ ಈ ಸ್ಥಾನಕ್ಕೆ ಆಯ್ಕೆಯಾಗಿದ್ದೇನೆ. ಸರ್ವ ಸದಸ್ಯರ ಸಹಕಾರದೊಂದಿಗೆ ಮುನಿಯೂರು ಗ್ರಾಮ ಪಂಚಾಯಿತಿಯ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತೇನೆ. ಮುನಿಯೂರು ಗ್ರಾ ಪಂ,ಯನ್ನು ತಾಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯತಿಯನ್ನಾಗಿ ಮಾಡುತ್ತೇನೆ ಹಾಗೂ ಕುಡಿಯುವ ನೀರು, ಗ್ರಾಮ ನೈರ್ಮಲ್ಯ, ಚರಂಡಿ ಸ್ವಚ್ಛತೆ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತೇನೇ ಅಭಿವೃದ್ಧಿಯ ಜೊತೆಗೆ ರೋಗ ರುಜಿನಗಳು ಹರಡದಂತೆ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು, ಇದೇ ವೇಳೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ಎಂ ಎಲ್ ಹಾಗೂ ಸಿಬ್ಬಂದಿ ವರ್ಗ,ಶ್ರೀರಾಂಪುರ ಗ್ರಾಮಸ್ಥರು, ಮುನಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರುಗಳು ಹಾಗೂ ತುಮಕೂರು ಜಿಲ್ಲಾ ಮಡಿವಾಳ ಸಂಘದ ಉಪಾಧ್ಯಕ್ಷರಾದ ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದು ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
ವರದಿ, ಮಂಜುನಾಥ್ ಕೆ ಎ ತುರುವೇಕೆರೆ.
