15 ವರ್ಷ ಬಾಲೆಯನ್ನು ವಿವಾಹವಾದ ಗ್ರಾಮ ಪಂಚಾಯಿತಿ ಅಧ್ಯಕ್ಷ
1 min read
15 ವರ್ಷ ಬಾಲೆಯನ್ನು ವಿವಾಹವಾದ ಗ್ರಾಮ ಪಂಚಾಯಿತಿ ಅಧ್ಯಕ್ಷ.
ಚಿಕ್ಕೋಡಿ,
ಗ್ರಾಮ ಪಂಚಾಯಿತಿ ಅಧ್ಯಕ್ಷ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ ಹಾಗೂ
ಸಚಿವ ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದಾಗಿದೆ.
ಬಸ್ಸಾಪುರ ಗ್ರಾಪಂ ಅಧ್ಯಕ್ಷ ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ.
ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಯಮಕನಮರಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
2023 ನವೆಂಬರ್ 5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ.
ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಗ್ರಾಪಂ ಅಧ್ಯಕ್ಷ ಭೀಮಶಿ ಕಳ್ಳಾಟ ನಡೆಸುತ್ತಿದ್ದಾನೆ.
ದೂರು ಬಂದ ತಕ್ಷಣವೇ ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಬಾರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಪ್ರವೀಣ ನೇತೃತ್ವದ ತಂಡ ನಾಲ್ಕು ಸಲ ಬಸ್ಸಾಪುರಕ್ಕೆ ಭೇಟಿ ನೀಡಿದೆ.
ಆದ್ರೂ ಕೂಡಾ ಬಾಲಕಿ ಪತ್ತೆ ಹಚ್ಚಲು ಮಕ್ಕಳ ರಕ್ಷಣಾ ತಂಡ ವಿಫಲವಾಗಿದೆ.
ಈ ಮಧ್ಯೆಯೇ ಆಕೆ ಪ್ರಾಪ್ತ ವಯಸ್ಸಿನವಳು ಅಲ್ಲ ಎಂಬ ಪ್ರಮಾಣ ಪತ್ರವನ್ನು ಅಧ್ಯಕ್ಷ ದಾಖಲೆ ಬಿಡುಗಡೆ ಮಾಡಿದ್ದ.
ಅಧ್ಯಕ್ಷ ಭಿಮಶಿ ಬಂಧನದ ಭೀತಿಯಿಂದ ಪತ್ನಿಯ ನಕಲಿ ಜನನ ಪ್ರಮಾಣ ಪತ್ರ ವೈರಲ್ ಮಾಡಿದ್ದ?
ಶಾಲಾ ಟ್ರಾನ್ಸಫರ್ ಸರ್ಟಿಫಿಕೇಟ್ ಜೊತೆಗೆ ಹೊಸ ಜನನ ಪ್ರಮಾಣದ ದಾಖಲೆ ಹೋಲಿಕೆ ಮಾಡಿದ ಅಧಿಕಾರಿಗಳು ಈ ವೇಳೆ ಗ್ರಾಪಂ ಅಧ್ಯಕ್ಷ ಭೀಮಶಿ ಕಾಲಿಮಣಿ ಬಾಲ್ಯ ವಿವಾಹ ಆಗಿರುವುದು ದೃಢವಾಗಿರುವುದನ್ನು ಖಚಿತಪಡಿಸಿದ್ದಾರೆ.
