ಮೆಟ್ರೋ ಹಳಿಗೆ ಹಾರಿ ಆತ್ಮಹ*ತ್ಯೆಗೆ ಯತ್ನ – ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ.!
1 min read

NAMMA METRO : ಮೆಟ್ರೋ ಹಳಿಗೆ ಹಾರಿ ಆತ್ಮಹ*ತ್ಯೆಗೆ ಯತ್ನ – ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ.!
ಬೆಂಗಳೂರು ನಮ್ಮ ಮೆಟ್ರೋ ಹಳಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆಂಗೇರಿಯಲ್ಲಿ ಸಂಭವಿಸಿದ್ದು, ಈ ಹಿನ್ನಲೆ ನೇರಳೆ ಮಾರ್ಗದ ಮೈಸೂರು ರಸ್ತೆಯಿಂದ ಚಲ್ಲಗಟ್ಟಕ್ಕೆ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.
ಇಂದು ಬೆಳ್ಳಂ ಬೆಳ್ಳಗ್ಗೆ ಅಡಚಣೆ ಉಂಟಾಗಿದ್ದು, ಪ್ರಯಾಣಿಕರು ಬಿಎಂಆರ್ಸಿಎಲ್ ವಿರುದ್ಧ ಆಕ್ರೋಶ ಹೊರಹಾಕಿದ್ದರು, ಇದೀಗ ಅಸಲಿ ಕಾರಣ ತಿಳಿಸಿದ್ದು, ಕೆಂಗೇರಿಯಲ್ಲಿ ಆತ್ಮಹತ್ಯೆ ಯತ್ನದಿಂದಾಗಿ ಮೈಸೂರು ರಸ್ತೆಯಿಂದ ಚಲ್ಲಘಟ್ಟಕ್ಕೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಈ ಅವಘಡದಿಂದಾಗಿ ರೈಲುಗಳು ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಚಲಿಸುತ್ತವೆ. ಸೇವೆಗಳು ಪುನಃಸ್ಥಾಪನೆಯಾದ ನಂತರ ನವೀಕರಿಸಲಾಗುತ್ತದೆ. ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ನಮ್ಮ ಮೆಟ್ರೋ ತಿಳಿಸಿದೆ.
![]()

