October 2026
M T W T F S S
 1234
567891011
12131415161718
19202122232425
262728293031  
October 27, 2026

c24kannada

ವಸ್ತುಸ್ಥಿತಿಯತ್ತ

ವಿಧಾನಪರಿಷತ್‌ ಚುನಾವಣೆ: ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್​​ನ ಪುಟ್ಟಣ್ಣಗೆ ಸೋಲು; ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್​​ ಗೆ ಜಯ

ಬೆಂಗಳೂರು : ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲುಂಡಿದ್ದು, ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್‌ ಗೆಲುವಿನ ನಗೆ ಬೀರಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 27,405 ಮತದಾರರಿದ್ದು, 22,468 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ನ್ ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ 10,810 ವೋಟ್​​ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ 9,902 ಮತಗಳು ಬಂದಿವೆ. ಅಂತಿಮವಾಗಿ 908 ಮತಗಳ ಅಂತರದಲ್ಲಿ ಎನ್​​ಡಿಎ ಅಭ್ಯರ್ಥಿ ಗೆದ್ದು ಬೀಗಿದ್ದಾರೆ. ಚಲಾವಣೆಯಾಗಿದ್ದ ಒಟ್ಟು ಮತಗಳ ಪೈಕಿ 20,611 ಸಿಂಧುವಾಗಿದ್ದರೆ, 1,857 ಅಸಿಂಧುವಾಗಿವೆ.

2026ರ ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಪ್ರಚಂಡ ಗೆಲುವು ದಾಖಲಿಸಿದ ಎನ್.ಡಿ.ಎ (ಬಿಜೆಪಿ – ಜೆಡಿಎಸ್) ಮೈತ್ರಿಕೂಟದ ಅಭ್ಯರ್ಥಿ ಎ.ಪಿ.ರಂಗನಾಥ್‌ ಅವರಿಗೆ ಜೆಡಿಎಸ್​​ ಅಭಿನಂದನೆ ತಿಳಿಸಿದೆ.

ರಂಗನಾಥ್ ಅವರ ಮೇಲೆ ವಿಶ್ವಾಸವಿಟ್ಟು, ಶಿಕ್ಷಕರ ಹಿತರಕ್ಷಣೆ ಮತ್ತು ಶಿಕ್ಷಣ ಕ್ಷೇತ್ರದ ಏಳಿಗೆಗಾಗಿ ಮತ ನೀಡಿ ಬೆಂಬಲಿಸಿದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಮಸ್ತ ಶಿಕ್ಷಕ ಹಾಗೂ ಅಧ್ಯಾಪಕ ಬಂಧುಗಳಿಗೆ ಅನಂತ ಧನ್ಯವಾದಗಳು. ಹಾಗೆಯೇ, ಈ ಐತಿಹಾಸಿಕ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸಿದ ಬಿಜೆಪಿ ಮತ್ತು ಜೆಡಿಎಸ್​​ ಪಕ್ಷದ ಎಲ್ಲಾ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರಿಗೂ ವಿಶೇಷ ಕೃತಜ್ಞತೆಗಳು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!