c24kannada

ವಸ್ತುಸ್ಥಿತಿಯತ್ತ

ಮೆಟ್ರೋ ದರ ಏರಿಕೆ‌ ನಮ್ಮಿಂದಾಗಿಲ್ಲ, ಉದಯಗಿರಿ ಗಲಾಟೆ ಹಿಂದೆ ಈಗಿನ ಸರ್ಕಾರವಿದೆ. -ಮಾಜಿ ಸಿಎಂ ಬಿ ಬೊಮ್ಮಾಯಿ

https://youtu.be/mcC4zQI2i-Q?si=jRjL5XFAsMMQhLxzಹುಬ್ಬಳ್ಳಿ: ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ,
ದರ ನಿಗದಿ ಮಾಡುವ ಒಂದು ಸಮಿತಿ ಇರುತ್ತೆ, ಅದು ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತದೆ.
ಅದರಲ್ಲಿ ಅಧಿಕಾರಿಗಳಿರುತ್ತಾರೆ ಹೀಗಾಗಿ ಈ
ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ
ಈಗಿನ ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ
ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ
ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ
ವಿದ್ಯುತ್, ನೀರು, ಹಾಲಿನ‌ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಪ್ರಶ್ನೆಗೆ ಹುಬ್ಬಳ್ಳಿಯಲ್ಲಿ ಉತ್ತರಿಸಿದ್ದಾರೆ.

ಮೈಸೂರಿನ ಉದಯಗಿರಿ ಗಲಾಟೆ ವಿಚಾರ:

ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನ ಹಿಂತೆಗೆದರೋ‌ ಆಗ ಸರ್ಕಾರ ಯಾರ ಪರ ಇದೆ ಅನ್ನೋದು ಎಲ್ಲರಿಗೂ ಗೊತ್ತಾಗಿದೆ.
ಪೊಲೀಸ್ ಠಾಣೆ ಮೇಲೆ ದಾಳಿ ಮಾಡೋದರ ಹಿಂದೆ ಯಾರ ಕುಮ್ಮಕ್ಕು ಇದೆ ಅನ್ನೋದು ಗೊತ್ತಾಗಿದೆ.
ಈ‌ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ ಐ ದಾಳಿ ಮಾಡಿತ್ತು,
ಅದೇ ಶಕ್ತಿಗಳು ಮತ್ತೆ ಒಂದಾಗಿವೆ.
ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ತವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ
ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ‌ ಇಲ್ಲ
ಮುಖ್ಯಮಂತ್ರಿಗಳು ಇದನ್ನ‌ ಗಂಭೀರವಾಗಿ ಪರಿಗಣಿಸಬೇಕು ಎಂದರು.
ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ
ಆದ್ರೆ ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವನ್ನು ಸರ್ಕಾರದ ಮುಂದೆ ಇಟ್ಟರು.

Leave a Reply

Your email address will not be published. Required fields are marked *

error: Content is protected !!