c24kannada

ವಸ್ತುಸ್ಥಿತಿಯತ್ತ

ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿ.ಎಂ.ಸಿದ್ದರಾಮಯ್ಯ

Share it

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು…ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ನೀಡುತ್ತೇನೆ ಎಂದು ಎಂ.ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ ಎಂದು ಸಿ.ಎಂ ಭರವಸೆ ನೀಡಿದರು. ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

 

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.

Loading

Leave a Reply

Your email address will not be published. Required fields are marked *

error: Content is protected !!