ಚಿಕ್ಕಬಳ್ಳಾಪುರ ತಾಲೂಕಿನ ಹಕ್ಕಿಜ್ವರ ಎಫೆಕ್ಟ್ ವರದಹಳ್ಳಿ ಗ್ರಾಮದಲ್ಲಿ ಹೈಅಲಾರ್ಟ್
1 min read
ಚಿಕ್ಕಬಳ್ಳಾಪುರ : ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಸಾಕಿದ್ದ ನಾಟಿ ಕೋಳಿಗಳಲ್ಲಿ ಹಕ್ಕಿಜ್ವರ ಪತ್ತೆಯಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ವರದಹಳ್ಳಿ ಗ್ರಾಮದಲ್ಲಿ ದ್ಯಾವಪ್ಪ ಎಂಬುವರಿಗೆ ಸೇರಿದ 28 ಕೋಳಿಗಳು ಹಾಗೂ ರತ್ನಮ್ಮ ಎಂಬುವರಿಗೆ ಸೇರಿದ 5 ಕೋಳಿಗಳು ರಕ್ತ ಭೇದಿ ಮಾಡಿಕೊಂಡು ದಿಢೀರನೇ ಪ್ರಾಣಬಿಟ್ಟಿದ್ದವು.
ಜಿಲ್ಲಾಡಳಿತದಿಂದ ವರದಹಳ್ಳಿ ಗ್ರಾಮದಲ್ಲಿ ಹೈಅಲಾರ್ಟ್ ಮಾಡಲಾಗಿದೆ.ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮಡಂಗೋರ ಹೊಡೆಸಿ ಗ್ರಾಮಸ್ಥರಿಗೆ ಅರಿವು ಮೂಡಿಸಿದ್ದಾರೆ. ಗ್ರಾಮದ ನಾಲ್ಕು ಬದಿಯಲ್ಲೂ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಯಾರು ಕೋಳಿ ಖರೀದಿ, ಮಾರಟ ಮಾಡದಂತೆ ಎಚ್ಚರಿಕೆ ನೀಡಿದರು. ಇಂದು ಕೋಳಿಗಳನ್ನು ಸೆರೆ ಹಿಡಿದು ಗುಣಿಯಲ್ಲಿ ಹಾಕಿ ಸಾಯಿಸುವ ಸಾಧ್ಯತೆಯಿದೆ. ಡಂಗೋರಾ ಸಾರಿಸಿ,ಗ್ರಾಮಸ್ಥರಿಗೆ ಅರಿವು ಮೂಡಿಸಿದರು.
ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಈ ಸತ್ತ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಬೆಂಗಳೂರಿನ ಪಶುಪಾಲನೆ ಹಾಗೂ ಜೈವಿಕ ವಿಜ್ಞಾನ ವಿಭಾಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಎರಡು ಕೋಳಿಗಳಲ್ಲಿ ಹಕ್ಕಿಜ್ವರದ ಎಚ್5ಎನ್1 ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಅದೇ ಮಾದರಿಗಳನ್ನು ಭೋಪಾಲ್‌ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲೂ ವೈರಸ್ ಇರುವುದು ದೃಢಪಟ್ಟಿದೆ. ಹೀಗಾಗಿ, ಮೌಖಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಹಕ್ಕಿಜ್ವರದ ಬಗ್ಗೆ ಮಾಹಿತಿ ನೀಡಲಾಗಿದ್ದು, ಲಿಖಿತ ವರದಿ ಇನ್ನಷ್ಟೇ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಅಧಿಕಾರಿಗಳ ತುರ್ತು ಸಭೆ ನಡೆಸಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.
