ಕರ್ನಾಟಕ ಭಿಕ್ಷುಕರ ರಾಜ್ಯವಾಗುತ್ತಿದೆ-ಚಾಮರಾಜನಗರದಲ್ಲಿ ಮಾಜಿ ಸಚಿವ ಶ್ರೀರಾಮುಲು ವಾಗ್ಧಾಳಿ
1 min read
https://youtu.be/o4h7QI9PpCc?si=lMztPmgdU5W3cvUp
ಚಾಮರಾಜನಗರ : ಕರ್ನಾಟಕ ಭಿಕ್ಷುಕರ ರಾಜ್ಯವಾಗುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ವಾಗ್ಧಾಳಿ ನಡೆಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು ಸಂಪನ್ಮೂಲದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ಕಾಂಗ್ರೆಸ್ ಸರ್ಕಾರ ಸರಿಯಾಗಿ ಆಡಳಿತ ನಡೆಸದೆ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ. ಎಸ್‌ಸಿಎಸ್ಪಿ ಟಿಎಸ್ಪಿ ಹಣ 25 ಸಾವಿರ ಕೋಟಿ ರೂಪಾಯಿ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಇದರಿಂದ ಎಸ್ಸಿಎಸ್ಟಿ ಸಮುದಾಯದ ಅಭಿವೃದ್ಧಿ ಕುಂಠಿತವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಮೀಸಲಿಡದೆ ಎಸ್‌ಸಿಎಸ್‌ಪಿ ಟಿಎಸ್ಪಿ ಹಣ ಬಳಸಿದ್ದಾರೆ. ಎಸ್ಸಿಎಸ್ಟಿ ಸಮುದಾಯಕ್ಕೆ ಮನೆ ಹೇಗೆ ನಿರ್ಮಿಸುಕೊಡ್ತೀರಿ ಮಕ್ಕಳಿಗೆ ಸ್ಕಾಲರ್ಶಿಪ್ ಹಣ ಎಲ್ಲಿಂದ ನೀಡ್ತೀರಿ, ಎಸ್ಸಿಎಸ್ಟಿ ಮಕ್ಕಳು ಉನ್ನತ ಶಿಕ್ಷಣ ಪಡೆಯೋದು ಹೇಗೆ? ಗಂಗಾ ಕಲ್ಯಾಣ ಯೋಜನೆ ಹೇಗೆ ಅನುಷ್ಠಾನ ಮಾಡ್ತೀರಿ, ಸಮುದಾಯ ಭವನ, ರಸ್ತೆ ಹೇಗೆ ಮಾಡ್ತೀರಿ, ಎಸ್‌ಸಿಎಸ್ಪಿ ಟಿಎಸ್ಪಿ ಅನುದಾನ ಶಾಸನಬದ್ಧ ಹಕ್ಕು, ಇದಕ್ಕಾಗಿ ನಾವು ಹೋರಾಟ ಆರಂಭಿಸಿದ್ದೇವೆ. ಮುಂದಿನ ಬಜೆಟ್ ನಲ್ಲಿ ಎಸ್‌ಸಿಎಸ್‌ಪಿ ಟಿಎಸ್‌ಪಿಗೆ ಅನುದಾನ ಮೀಸಲಿಡಬೇಕು. ಈಗ ಆಗಿರುವ ಅನ್ಯಾಯ ಸರಿಪಡಿಸಬೇಕು. ನಮ್ಮ ಪಾಲು ನಮಗೆ ಸಿಗಬೇಕು ಚಾಮರಾಜನಗರದಲ್ಲಿ ಶ್ರೀರಾಮಲು ಹೇಳಿದರು.
