c24kannada

ವಸ್ತುಸ್ಥಿತಿಯತ್ತ

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ,ಸ್ಥಳದಲ್ಲೇ 5 ಸಾವು

 

ಚಾಮರಾಜನಗರ :  ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ  ಕೊಳ್ಳೇಗಾಲ  ತಾಲೂಕಿನ ಚಿಕ್ಕಿಂದುವಾಡಿ ಬಳಿ ನಡೆದಿದೆ. ಐವರು ಸ್ಥಳದಲ್ಲೇ ಮೃತಪಟ್ಟಿದ್ದು,  ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಟಿಪ್ಪರ್​ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ. ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ  ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!