ಸಿಡಿಲು ಬಡಿದು ಮನೆ ಮುಂದೆ ನಿಂತಿದ್ದ ಯುವಕ ಸಾವು

ವಿಜಯನಗರ: ಸಿಡಿಲು ಬಡಿದು 16 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಗುರುವಾರ ರಾತ್ರಿ ನಡೆದಿದೆ. ಪಾಂಡುನಾಯ್ಕ್ (16) ಸಾವನಪ್ಪಿದ ಬಾಲಕ. ಮಳೆ ಬರುವ ಸಮಯದಲ್ಲಿ ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]()