c24kannada

ವಸ್ತುಸ್ಥಿತಿಯತ್ತ

ಲಾರಿಗಳ ಮಧ್ಯೆ ಸರಣಿ ಅಪಘಾತ…. ರಸ್ತೆ ಮಧ್ಯೆ ಪಲ್ಟಿಯಾದ ಸಿಲಿಂಡರ್ ಲಾರಿ, ತಪ್ಪಿದ ಬಾರಿ‌ ಅನಾಹುತ.

ಧಾರವಾಡ : ಮೂರು ಲಾರಿಗಳ ಮಧ್ಯೆ ಸರಣಿ ಅಪಘಾತ ನಡೆದು, ಗೋ ಗ್ಯಾಸ್ ತುಂಬಿದ ಸಿಲಿಂಡರ್ ಲಾರಿ ರಸ್ತೆ ಮಧ್ಯೆಯೇ ಪಲ್ಟಿಯಾಗಿರುವ ಘಟನೆ ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಬಾರಿ ಅನಾಹುತವೊಂದು ತಪ್ಪಿದೆ.‌ ವೈ- ಟೈಲ್ಸ್ ಹೊತ್ತೊಯ್ಯುತ್ತಿದ್ದ ಲಾರಿ, ಕಾಂಕ್ರೀಟ್ ಮಿಕ್ಸ್ ಮಾಡುವ ಲಾರಿ ಹಾಗೂ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಗಳ ಮಧ್ಯೆ ಸರಣಿ ಅಪಘಾತವಾಗಿದೆ. ಟೈಲ್ಸ್ ಹಾಗೂ ಕಾಂಕ್ರೀಟ್ ಮಿಕ್ಸ್ ಮಾಡುವ ಲಾರಿ ಮಧ್ಯೆ ಮೊದಲು ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಹಿಂದೆ ಬರುತ್ತಿದ್ದ ಸಿಲಿಂಡರ್ ತುಂಬಿ ಲಾರಿ ಟೈಲ್ಸ್ ಹೊತ್ತೊಯ್ಯುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆಯೇ ಪಲ್ಟಿಯಾಗಿದೆ.

 

ತುಂಬಿದ ಸಿಲಿಂಡರ್ ಇದ್ದ ಪರಿಣಾಮ ಸ್ಥಳದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದವರು ಹಾಗೂ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಲಾರಿಯನ್ನು ಮೇಲೆತ್ತುವ ಕೆಲಸ ಮಾಡಿದರು. ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಇನ್ನೂ ಸರಣಿ ಅಪಘಾತಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ‌ ಸಂಚಾರ ಅಸ್ತವ್ಯಸ್ತತೆ ಉಂಟಾಗಿತ್ತು.‌ ಗಾಯಾಳುಗಳ ರಕ್ಷಣೆ ಬಳಿಕ ಅಪಘಾತಗೊಂಡ ವಾಹನ‌ ತೆರವು ಮಾಡಿ ಸುಗಮ‌ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಂಟ್ಟರು.‌

Leave a Reply

Your email address will not be published. Required fields are marked *

error: Content is protected !!