ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ KSRTC ಬಸ್
1 min read
ಮಂಡ್ಯ : KSRTC ಬಸ್ ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ನಲ್ಲಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 10 ಕ್ಕೂಹೆಚ್ಚು ಜನರಿಗೆ ಗಾಯ,ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ಚಿಕಿತ್ಸೆಗಾಗಿ ಪಾಂಡವಪುರ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
