ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧಾರ
1 min read
ಬೆಂಗಳೂರು : ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಹವಣಿಸುತ್ತಿದೆ. ಇದಕ್ಕಾಗಿಯೇ ಭರ್ಜರಿ ತಾಲೀಮು ನಡೆಸಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಇತ್ತ ಕರ್ನಾಟಕದಲ್ಲಿ ಕೂಡ ಮಾಕ್ ಡ್ರಿಲ್ ಮಾಡಲು ನಿರ್ಧರಿಸಲಾಗಿದೆ.
ಬೆಂಗಳೂರಿನ 35 ಕಡೆ ಸೈರನ್ ಇದ್ದು, 32 ಕಡೆ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ಸೈರನ್ ಕಾರ್ಯ ನಿರ್ವಹಿಸುವ ಕಡೆ ಮಾಕ್ಡ್ರಿಲ್ ನಡೆಯಲಿದೆ. ಇಂಡಿಯನ್ ಇನ್ಸ್ಟಿಟ್ಯೂಟ್, ಸಿಕ್ಯುಎಎಲ್, ಇಎಸ್ಐ ಆಸ್ಪತ್ರೆ, ಎನ್ಎಎಲ್, ಬೆಂಗಳೂರು ಡೈರಿ, ಕೆನರಾ ಬ್ಯಾಂಕ್, SRS ಪೀಣ್ಯ, ವಿವಿ ಟವರ್ ಅಗ್ನಿಶಾಮಕ ಠಾಣೆ, ಜ್ಞಾನಭಾರತಿ ಅಗ್ನಿಶಾಮಕ ಠಾಣೆ, ಥಣಿಸಂದ್ರ ಅಗ್ನಿಶಾಮಕ ಠಾಣೆ, ಬಾಣಸವಾಡಿ ಅಗ್ನಿಶಾಮಕ ಠಾಣೆ, ಯಶವಂತಪುರ ಅಗ್ನಿಶಾಮಕ ಠಾಣೆ, ಬನಶಂಕರಿ ಅಗ್ನಿಶಾಮಕ ಠಾಣೆ, ರಾಜಾಜಿನಗರ ಅಗ್ನಿಶಾಮಕ ಠಾಣೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ, ಹಲಸೂರು ಗೇಟ್ ಠಾಣೆ, ಹಲಸೂರು ಪೊಲೀಸ್ ಠಾಣೆ, ಉಪ್ಪಾರಪೇಟೆ ಪೊಲೀಸ್ ಠಾಣೆ, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ, ಕಾಮಾಕ್ಷಿಪಾಳ್ಯ ಠಾಣೆ, ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣೆ, ವೈಯಾಲಿಕಾವಲ್ ಠಾಣೆ, ಹಲಸೂರು ಗೃಹರಕ್ಷಕದಳ ಕೇಂದ್ರ ಕಚೇರಿ, ಪೀಣ್ಯ ಅಗ್ನಿಶಾಮಕ ಠಾಣೆ, ಬೆಂಗಳೂರು ಗ್ರಾಮಾಂತರ ಗೃಹರಕ್ಷಕದಳ ಕಚೇರಿ, ಬಾಗಲೂರು ಅಗ್ನಿಶಾಮಕ ಠಾಣೆ, ಅಂಜನಾಪುರ ಅಗ್ನಿಶಾಮಕ ಠಾಣೆ, ITPL ಅಗ್ನಿಶಾಮಕ ಠಾಣೆ, ಸರ್ಜಾಪುರ ಅಗ್ನಿಶಾಮಕ ಠಾಣೆ, ಎಲೆಕ್ಟ್ರಾನಿಕ್ ಅಗ್ನಿಶಾಮಕ ಠಾಣೆ ಮತ್ತು ಡೈರಿ ಸರ್ಕಲ್ ಅಗ್ನಿಶಾಮಕ ಠಾಣೆಯಲ್ಲಿ ನಡೆಯಲಿದೆ.
