ಆಪರೇಷನ್ ಸಿಂಧೂರ್​​ ಬೆನ್ನಲ್ಲೇ ಕರ್ನಾಟದ ಡ್ಯಾಂಗಳಲ್ಲಿ ಹೈ ಅಲರ್ಟ್: ಬಿಗಿ ಭದ್ರತೆ

1 min read
Share it

 

ಬೆಂಗಳೂರು : ನಿನ್ನೆಯಷ್ಟೇ ‘ಆಪರೇಷನ್ ಸಿಂಧೂರ’ ಮೂಲಕ ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆ ಯಶಸ್ವಿಯಾಗಿ ಸೇಡು ತೀರಿಸಿಕೊಂಡಿದದೆ. ಪಿಓಕೆ ಹಾಗೂ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ 9 ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮೂಲಕ ಉಡೀಸ್ ಮಾಡಿದೆ.ಪಾಕ್ ಬೆಂಗಲಿತ ಉಗ್ರರು ಜಮ್ಮು ಕಾಶ್ಮೀರದ ಪೆಹೆಲ್ಗಾಮ್​ನಲ್ಲಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ದೇಶದ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಪಾಕಿಸ್ತಾನ ಯುದ್ದದ ಭೀತಿ ಎದುರಿಸುತ್ತಿದೆ. ಆಪರೇಷನ್ ಸಿಂಧೂರ್  ಯಶಸ್ವಿ ಹಿನ್ನಲೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಹಾಗಾಗಿ ದೇಶದ ಡ್ಯಾಂಗಳಲ್ಲಿ ಭದ್ರತೆಗೆ ಸೂಚನೆ ಬೆನ್ನಲ್ಲೇ ಇತ್ತ ಕರ್ನಾಟದ ಡ್ಯಾಂಗಳಲ್ಲಿ  ಬಿಗಿ ಭದ್ರತೆ ಸೂಚಿಸಲಾಗಿದೆ.

 

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂನಲ್ಲಿ ಭದ್ರತೆ ಬಿರುಸುಗೊಂಡಿದೆ. ಈಗಾಗಲೇ ಭದ್ರವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂನಲ್ಲಿ ಭದ್ರತೆ ಬಿರುಸುಗೊಂಡಿದೆ. ಈಗಾಗಲೇ ಭದ್ರತೆಯ ನೇತೃತ್ವ ವಹಿಸಿಕೊಂಡಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಿಕೊಂಡಿದೆ.ತೆಯ ನೇತೃತ್ವ ವಹಿಸಿಕೊಂಡಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಿಕೊಂಡಿದೆ.

 

ಆಲಮಟ್ಟಿ ಡ್ಯಾಂ ಪ್ರವೇಶ‌ ದ್ವಾರದಿಂದಲೇ ಎಲ್ಲಾ ವಾಹನಗಳ ತಪಾಸಣೆ ಮಾಡಲಾಗುವುದು. ಬಾರೀ ಹಾಗೂ ಗೂಡ್ಸ್ ವಾಹನಗಳಿಗೆ ನಿಷೇಧಿಸಲಾಗಿದೆ, ಓರ್ವ ಡಿವೈಎಸ್​​ಪಿ ನೇತೃತ್ವದಲ್ಲಿ ಒಟ್ಟು 86 ಕೆಎಸ್ಐಎಸ್ಎಫ್ ಅಧಿಕಾರಿಗಳಿಂದ ಆಧುನಿಕ ಶಸ್ತ್ರಾಸ್ತ್ರಗಳ ಸಹಿತ ಭದ್ರತೆ ಒದಗಿಸಲಾಗಿದೆ. ಡ್ಯಾಂ ಆವರಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಇರಲಿದೆ. ನಿತ್ಯ 24 ಗಂಟೆಗಳ ಕಾಲ ಮೂರು ಪಾಳಯದಲ್ಲಿ ಭದ್ರತೆ ಇರಲಿದೆ. ಬೋಟ್ ಮೂಲಕ ಡ್ಯಾಂ ಹಿನ್ನೀರಿನಲ್ಲೂ ತಪಾಸಣೆ ಕಟ್ಟೆಚ್ಚರ ವಹಿಸಲಾಗಿದೆ.

ಅದೇ ರೀತಿಯಾಗಿ ಹಾಸನ ತಾಲ್ಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದ ಮೇಲೆ ತೀವ್ರ ನಿಗಾ ಇಡಲು ಭದ್ರತಾ ಪಡೆಗೆ ಭದ್ರತಾ ಇಲಾಖೆ ವಿಶೇಷ ಸೂಚನೆ ನೀಡಿದೆ. ಹೇಮಾವತಿ ಜಲಾಯಶದಲ್ಲಿ ಕೈಗಾರಿಕಾ ಭದ್ರತಾ ಪಡೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ. ಓರ್ವ ಪಿಐ, ಓರ್ವ ಪಿಎಸ್​ಐ, ನಾಲ್ವರು ಎಎಸ್​ಐ ಸೇರಿ 22 ಪೊಲೀಸರಿಂದ ಭ ದ್ರತೆ ಒದಗಿಸಲಾಗಿದೆ.

 

ಏರ್‌ಸ್ಟ್ರೈಕ್, ದ್ರೋಣ್ ಅಟ್ಯಾಕ್ ಆಗವ ಸಾಧ್ಯತೆ ಹಿನ್ನೆಲೆಯಲ್ಲಿ ತೀವ್ರ ನಿಗಾವಹಿಸಲು ಸೂಚಿಸಿದ್ದು, ದಾಳಿಯಾದ ವೇಳೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಈಗಾಗಲೇ ಅಧಿಕಾರಿಗಳಿಂದ (ಡೆಮೋ) ಐಎಸ್‌ಡಿ ಡಿಜಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಆಣೆಕಟ್ಟೆ ಭದ್ರತೆಗೆ ಎಲ್ಲಾ ಕಡೆ ಅಲರ್ಟ್ ಮಾಡಲಾಗಿದೆ. ಯಾವ ಟೈಮ್​​ನಲ್ಲಿ ಏನಾದರೂ ಆಗಬಹುದು ಎಂಬ ಕಾರಣಕ್ಕೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Loading

Leave a Reply

Your email address will not be published. Required fields are marked *

error: Content is protected !!
Open chat
Hello
Can we help you?