ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ
1 min read
ಬೆಂಗಳೂರು : ಸಂಜೆ ಆಗುತ್ತಿದ್ದಂತೆ ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ. ರಸ್ತೆಯಲ್ಲೇ ಹರಿಯುತ್ತಿರುವ ಮಳೆ ನೀರಿಗೆ ಸಿಲುಕಿದ ವಾಹನ ಸವಾರರು ಹೈರಾಣಾಗಿದ್ದಾರೆ. ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಬೆಂಗಳೂರಿನ ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಲಾಲ್ ಬಾಗ್,ಮಲ್ಲೇಶ್ವರಂ, ಯಶವಂತಪುರ,ವಸಂತನಗರ, ಕಬ್ಬನ್ ಪಾರ್ಕ್ ರಸ್ತೆ, ರಿಚ್ಮಂಡ್ ಸರ್ಕಲ್ ,ಚಂದಾಪುರ, ಎಲೆಕ್ಟ್ರಾನಿಕ್ ಸಿಟಿ,ಬೊಮ್ಮನಹಳ್ಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಗೆ ವಾಹನ ಸವಾರರ ಪರದಾಡುವ ದೃಶ್ಯ ಕಂಡು ಬಂದಿದೆ.
ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಸಿಲಿಕಾನ್ ಸಿಟಿಯಲ್ಲಿ ನಿನ್ನೆಯ ಮಳೆರಾಯ ತಂಪೆರೆದಿದ್ದ. ಇಂದು ಸಹ ನಗರದ ಹಲವಾರು ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮೇ 13 ರಿಂದ 19ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಮೇ 15ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೇ 14ರಂದು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಹಾಗೂ ಮೇ 15ರಂದು ವಿಜಯಪುರ, ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮೇ 13ರಿಂದ 19ರವರೆಗೆ ಮಳೆಯಾಗಲಿದ್ದು, ಮೊದಲ 2 ದಿನ ಹೊರತು ಪಡಿಸಿ ಉಳಿದ ಎಲ್ಲಾ ದಿನ ವ್ಯಾಪಕ ಮಳೆಯಾಗಲಿದೆ. ಮೇ 13ರಂದು ಚಿತ್ರದುರ್ಗ, ಹಾಸನ, ಕೊಡಗು. ಮೈಸೂರು ಹಾಗೂ ಮೇ 14ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
